ದ.ಕ ಜಿಲ್ಲೆಯಲ್ಲಿ 7ನೇ ಆರ್ಥಿಕ ಗಣತಿ ಜ.1 ರಿಂದ ಪ್ರಾರಂಭ

February 8, 2020
10:10 AM

ಮಂಗಳೂರು: ಆರ್ಥಿಕ ಗಣತಿಯು ಜಿಲ್ಲೆಯ  ಭೌಗೋಳಿಕ ಗಡಿಯೊಳಗೆ ನೆಲೆಗೊಂಡಿರುವ ಎಲ್ಲಾ ಉದ್ಯಮಗಳ /ಘಟಕಗಳ ಪೂರ್ಣಗಣತಿ ಮಾಡುವುದಾಗಿದೆ. ಈ ಗಣತಿಯ ಮೂಲಕ ಜಿಲ್ಲೆಯ ಒಟ್ಟು ಸಂಘಟಿತ ಹಾಗೂ ಅಸಂಘಟಿತ ವಲಯದಲ್ಲಿನ ಕೃಷಿ ಹಾಗೂ ಕೃಷಿಯೇತರ ವಿವಿಧ ಉದ್ಯಮಗಳಲ್ಲಿ ತೊಡಗಿಸಿರುವ ಆರ್ಥಿಕ ಚಟುವಟಿಕೆಗಳಲ್ಲಿನ ಹಣಕಾಸು ಹಂಚಿಕೆ, ಉದ್ಯೋಗಾವಕಾಶ, ವರಮಾನ, ಉತ್ಪಾದನೆ ಮುಂತಾದ ವಿವರಗಳನ್ನು ತಿಳಿಯಬಹುದಾಗಿದೆ. ಇದರಿಂದಾಗಿ ಆರ್ಥಿಕ ಅಭಿವೃದ್ದಿಯಲ್ಲಿನ ಪ್ರಾದೇಶಿಕ ಅಸಮತೋಲನವನ್ನು ಗುರುತಿಸಬಹುದಾಗಿದ್ದು ರಾಜ್ಯದ ಆಂತರಿಕ ಉತ್ಪಾದನೆಯಂತಾದ ಮುಖ್ಯವಾದ ಅಂಶಗಳನ್ನು ಕಂಡುಹಿಡಿಯಲು ಪ್ರಮುಖ ಸಾಧನವಾಗಿ ಉಪಯೋಗಿಸಲಾಗುತ್ತದೆ. ಆರ್ಥಿಕ ಗಣತಿಯ ಮೂಲಕ ಲಭ್ಯವಾಗುವ ಮಾಹಿತಿಗಳು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲು ಯೋಜನೆ ಸಿದ್ದಪಡಿಸಲು ಸರಕಾರಕ್ಕೆ ಮೂಲ ಅಂಕಿ ಅಂಶವಾಗಿರುತ್ತದೆ.

Advertisement
Advertisement

ಈ ಗಣತಿಯಲ್ಲಿ ಸಂಗ್ರಹಿಸಿದ ಮಾಹಿತಿಗಳನ್ನು ಯೋಜನೆಗಳನ್ನು ರೂಪಿಸುವ ಉದ್ದೇಶಕ್ಕೆ ಮತ್ತು ಆರ್ಥಿಕ ಗಣತಿಯು ಒದಗಿಸಿದ ಚೌಕಟ್ಟಿನ ಆಧಾರದ ಮೇಲೆ ಹೆಚ್ಚಿನ ಸಮೀಕ್ಷೆಗಳನ್ನು ಕೈಗೊಳ್ಳುವುದರ ಮೂಲಕ ವಿವಿಧ ವಲಯಗಳಿಂದ ಆರ್ಥಿಕತೆಗೆ ದೊರಕುವ ಕೊಡುಗೆಗಳನ್ನು ಅಂದಾಜಿಸಲು ಉಪಯೋಗಿಸಲಾಗುತ್ತದೆ. ಈ ಮಾಹಿತಿಯನ್ನು ಯಾವುದೇ ಸಾಕ್ಷ್ಯವಾಗಿ ಉಪಯೋಗಿಸುವುದಿಲ್ಲ. ರಾಜ್ಯ ಮತ್ತು  ದೇಶದ ಆರ್ಥಿಕ ಸ್ಥಿತಿಗತಿ, ವಾಸ್ತವತೆಯನ್ನು ಅರಿಯಲು ಹಾಗೂ ಸರ್ಕಾರದ ಯೋಜನೆ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆರ್ಥಿಕ ಗಣತಿ ದಿಕ್ಸೂಚಿಯಾಗಲಿದೆ. ಆರ್ಥಿಕ ಗಣತಿಯನ್ನು ಭಾರತ ಸರ್ಕಾರ 5 ವರ್ಷಕ್ಕೊಮ್ಮೆ  ನಿಯಮಿತವಾಗಿ ಕೈಗೊಳ್ಳುತ್ತಿದ್ದು 1977 ರಿಂದ ಈಗಾಗಲೇ 6 ಆರ್ಥಿಕ ಗಣತಿಯನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ.

ಪ್ರಸ್ತುತ 7ನೇ ಆರ್ಥಿಕ ಗಣತಿಯಲ್ಲಿ ಭಾರತ ಸರ್ಕಾರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಮಂತ್ರಾಲಯವು   ಕಾಮನ್ ಸರ್ವಿಸ್ ಸೆಂಟರ್ಸ್, ಮಿನಿಸ್ಟ್ರಿಸ್ ಆಫ್ ಎಲೆಕ್ಟ್ರಾನಿಕ್ಸ್ & ಐಟಿಐ ಇದರ ಮೂಲಕ ಕೈಗೊಳ್ಳಲು ಉದ್ಧೇಶಿಸಿದ್ದು 2020ರ ಜನವರಿ 1 ರಿಂದ ರಾಜ್ಯಾದ್ಯಂತ ಚಾಲನೆಗೊಂಡಿದೆ. ಈ ಗಣತಿಯ ಕ್ಷೇತ್ರ ಕಾರ್ಯವನ್ನು ಇದೇ ಪ್ರಥಮ ಬಾರಿಗೆ ಮೊಬೈಲ್ ಆಪ್ ಮೂಲಕ ಕೈಗೊಳ್ಳಲಾಗುತ್ತಿದೆ. ಆರ್ಥಿಕ ಗಣತಿ ಕಾರ್ಯದಲ್ಲಿ ಗಣತಿದಾರರು ತಮಗೆ ನಿರ್ದಿಷ್ಟಪಡಿಸಿದ ಗಡಿಯೊಳಗೆ ಬರುವ ಮನೆ ಹಾಗೂ ಎಲ್ಲಾ ಕಟ್ಟಡಗಳಿಗೆ ಭೇಟಿ ನೀಡಿ ಗಣತಿ ನಡೆಸುವುದರ ಮೂಲಕ ಅಲ್ಲಿ ನಡೆಯುವ ಉದ್ಯಮದ ಅಥವಾ ವ್ಯಾಪಾರ ಘಟಕದ ಎಣಿಕೆ ಮಾಡಲಾಗುತ್ತದೆ. ಯಾವುದೇ ಘಟಕದಲ್ಲಿ  ಸ್ವಂತ ಉಪಯೋಗಕ್ಕಲ್ಲದ ಸರಕುಗಳ ಉತ್ಪಾದನೆ ಅಥವಾ ಅವುಗಳ ವಿತರಣೆ ಮಾರಾಟ ಅಥವಾ ಸೇವೆ ಇತ್ಯಾದಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿರುವಂತಹ ಉದ್ಯಮಗಳ ಪಟ್ಟಿಯನ್ನು ಸಿದ್ದಪಡಿಸಲಾಗುತ್ತದೆ. ಹೀಗೆ ಪಟ್ಟಿ ಮಾಡುವಾಗ ನಿರ್ದಿಷ್ಟ ಕಟ್ಟಡ ಹೊಂದಿ ವ್ಯವಹಾರ ಮಾಡುವ ಉದ್ಯಮಗಳಲ್ಲದೆ ನಿರ್ದಿಷ್ಟ ಕಟ್ಟಡವಿಲ್ಲದ ಸಂತೆ, ಬೀದಿ ಬದಿಯ ವ್ಯಾಪಾರ, ಮನೆಯಲ್ಲಿಯೇ ಕುಳಿತು ನಿರ್ವಹಿಸುವ ಟೈಲರಿಂಗ್, ಬೀಡಿ ಕಟ್ಟುವುದು ಮತ್ತು ವಿವಿಧ ಸ್ವ ಉದ್ಯೋಗಗಳು ಹೈನುಗಾರಿಕೆ ಇತ್ಯಾದಿ ಆರ್ಥಿಕ ಚಟುವಟಿಕೆ ನಡೆಸುವ ಉದ್ಯಮಗಳನ್ನು ಅದರ ಮಾಲೀಕರ ಮನೆಯಲ್ಲಿ ಎಣಿಕೆ ಮಾಡಲಾಗುತ್ತದೆ.

7ನೇ ಆರ್ಥಿಕ ಗಣತಿಯಲ್ಲಿ ಕಟ್ಟಡದ ವಿಧ, ಕುಟುಂಬ ವಿವರ, ಸಾಮಾಜಿಕ ಗುಂಪು ಮತ್ತು ಧರ್ಮ, ಆರ್ಥಿಕ ಚಟುವಟಿಕೆಯ ವಿಧ, ಕಾರ್ಯವಿಧಾನ ಸ್ವರೂಪ, ಮನೆಯಲ್ಲಿ ಆರ್ಥಿಕ ಚಟುವಟಿಕೆ ನಡೆಸುವ ಸದಸ್ಯರ ವಿವರ, ಹಣಕಾಸಿನ ಮೂಲ, ಹೂಡಿಕೆ, ವಾರ್ಷಿಕ ವ್ಯವಹಾರ, ಕೆಲಸಗಾರರ ಸಂಖ್ಯೆ, ಘಟಕದ ನೋಂದಣಿಯ ವಿವರ, ಉದ್ಯಮ ಮಾಲೀಕರ ಲಿಂಗವಾರು ಸಾಮಾಜಿಕ ಗುಂಪುವಾರು ಮಾಹಿತಿಗಳು, ಗಂಡು-ಹೆಣ್ಣು ಕೆಲಸಗಾರರು, ಮಜೂರಿದಾರ ಕೆಲಸಗಾರರು, ಮಜೂರಿದಾರರಲ್ಲದ ಕೆಲಸಗಾರರು  ಉದ್ದಿಮೆಗಾಗಿ ಹಣಕಾಸಿನ ಮೂಲ ಇತ್ಯಾದಿ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತದೆ.

ಈ ಗಣತಿ ಕಾರ್ಯಕ್ಕೆ ಸಾಮಾನ್ಯ ಸೇವಾ ಕೇಂದ್ರದ ಗಣತಿದಾರರು ಮಾಹಿತಿ ಸಂಗ್ರಹಿಸಲು ಬಂದಾಗ ಸಾರ್ವಜನಿಕರು ಉದ್ದಿಮೆದಾರರು ವಿವಿಧ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರು ಅಗತ್ಯ ಮತ್ತು ನಿಖರ ಮಾಹಿತಿ ನೀಡಿ 7ನೇ ಆರ್ಥಿಕ ಗಣತಿ ಕಾರ್ಯ ಯಶಸ್ವಿಯಾಗಲು ಸಹಕರಿಸುವಂತೆ ಮಂಗಳೂರು, ದಕ್ಷಿಣ ಕನ್ನಡ, ಜಿಲ್ಲಾಧಿಕಾರಿ ಇವರ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ
May 23, 2025
10:27 PM
by: The Rural Mirror ಸುದ್ದಿಜಾಲ
ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ
May 22, 2025
8:02 PM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |
May 19, 2025
10:15 AM
by: The Rural Mirror ಸುದ್ದಿಜಾಲ
ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ
May 16, 2025
9:43 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group