ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಹಿತ ಮಳೆಯಾಗಿದೆ. ಸುಳ್ಯ, ಕಡಬ, ಪುತ್ತೂರು ತಾಲೂಕಿನ ವಿವಿದೆಡೆ ಗಾಳಿ ಮಳೆ ಸುರಿದಿದ್ದು, ಗಾಳಿಗೆ ಮರ ಬಿದ್ದು ವಿವಿದೆಡೆ ಹಾನಿಯಾಗಿದೆ.
ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಕೊಲ್ಲಮೊಗ್ರ, ಕಲ್ಲಾಜೆ, ಗುತ್ತಿಗಾರು, ಬಳ್ಪ, ಪಂಜ ಸೇರಿದಂತೆ ಸುಳ್ಯ, ಸಂಪಾಜೆ , ಮರ್ಕಂಜ ಮೊದಲಾದ ಕಡೆಗಳಲ್ಲಿ ಮಳೆಯಾದರೆ ಕಡಬ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ಮಳೆಯಾಗಿದೆ.
ಭಾರೀ ಗಾಳಿಗೆ ಸುಳ್ಯ ತಾಲೂಕಿನ ಹಲವಾರು ಕಡೆ ಮನೆಗಳಿಗೆ ಮರ ಬಿದ್ದು ಹಾನಿಯಾಗಿದ್ದು, ಸುಳ್ಯದ ಲೂಸಿ ಡಿಸೋಜಾ ಎಂಬವರ ಮನೆಯ ಮಾಡಿಗೆ ಮಾವಿನ ಮರದ ಬೃಹತ್ ಗೆಲ್ಲು ಮುರಿದು ಬಿದ್ದು ಮೇಲ್ಛಾವಣಿ ಹಾನಿಗೊಂಡಿದೆ. ಜಯನಗರ ಉಮೇಶ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಹಾಗೂ ತೆಂಗಿನ ಮರ ಮುರಿದು ಬಿದ್ದು ಹಾನಿಯಾಗಿದೆ. ನಾರಾಯಣ ಮಣಿಯಾಣಿ ಎಂಬವರ ಮನೆಯ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಉಳಿದಂತೆ ಗ್ರಾಮೀಣ ಭಾಗದಲ್ಲೂ ಹಲವು ಕಡೆ ಸಮಸ್ಯೆಯಾಗಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…