ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರವೂ ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಎಲ್ಲಾ ನೆಗೆಟಿವ್ ಬಂದಿದೆ. 390 ಜನರ ಪರೀಕ್ಷಾ ವರದಿ ಬುಧವಾರ ಬಂದಿದೆ. ಬುಧವಾರದಂದು 248 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. 12 ಮಂದಿ ನಿಗಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 1859 ಮಂದಿಯನ್ನು ಫಿವರ್ ಕ್ಲೀನಿಕ್ ನಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.
ಈ ನಡುವೆ ಬಂಟ್ವಾಳದ ಕಸಬ ನಿವಾಸಿ ಕೊರೊನಾ ಸೋಂಕಿತ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಮಹಿಳೆಗೆ ಐಸಿಯುನಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.
ಮಂಗಳೂರು ನಗರದ ಬೋಳೂರಿನ ಮಹಿಳೆಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ನಿಗಾದಲ್ಲಿ ಇರಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಸದ್ಯ ನೆಮ್ಮದಿಯ ವಾತಾವರಣ ಇದ್ದು ನಿಗಾ ಮುಂದುವರಿದಿದೆ.
ರಾಜ್ಯದಲ್ಲಿ 8 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 535 ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 21 ಜನರು ಮೃತಪಟ್ಟಿದ್ದು, 216 ಮಂದಿ ಗುಣಮುಖರಾಗಿದ್ದಾರೆ. ಬುಧವಾರ ತುಮಕೂರಿನಲ್ಲಿ 73 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.
ಕಾಸರಗೋಡಿನಲ್ಲಿ ಇಬ್ಬರಿಗೆ ಬುಧವಾರ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಹೀಗಾಗಿ ಚಿಕಿತ್ಸೆ ಮುಂದುವರಿದಿದೆ. ಕೇರಳದಲ್ಲಿ ಒಟ್ಟು 10 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು,
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…