Advertisement
ಸುದ್ದಿಗಳು

ಧನಾತ್ಮಕ ಚಿಂತನೆಗಳು ವ್ಯಕ್ತಿಯನ್ನು ಸಾಧನೆಯೆಡೆಗೆ ಕೊಂಡೊಯ್ಯುತ್ತದೆ – ಎಸ್ ಆರ್ ಸತೀಶ್ಚಂದ್ರ

Share

ಪುತ್ತೂರು: ಸಾರಸ್ವತ ಲರ್ನಿಂಗ್ ಫೌಂಡೇಶನ್ ಮತ್ತು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಭಾಲಾವಲೀಕರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇವರ ಸಹಕಾರದೊಂದಿಗೆ ಯುವ ಸಬಲೀಕರಣ ಮತ್ತು ವ್ಯಕ್ತಿತ್ವ ವಿಕಸನ ಯೋಜನೆಯಡಿ ಅಂತರಾಷ್ಟ್ರೀಯ ತರಬೇತುದಾರರಾದ  ಸುಬ್ರಹ್ಮಣ್ಯ ಕುಳೇದು ಇವರಿಂದ 10ನೇ ತರಗತಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ “ಎಕ್ಸಾಮ್ ಸಕ್ಸಸ್ ಟ್ರೈನಿಂಗ್” ಎಂಬ ವಿಷಯದ ಕುರಿತು ತರಬೇತಿ ಕಾರ್ಯಕ್ರಮವು ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‍ನ ಮ್ಯಾನೇಂಜಿಂಗ್ ಟ್ರಸ್ಟಿ  ಎಸ್ ಆರ್ ಸತೀಶ್ಚಂದ್ರ ನೆರವೇರಿಸಿ,” ನಾವು ಯಾವುದೇ ನಕಾರಾತ್ಮಕ ವಿಚಾರಗಳ ಗಮನಕೊಡದೆ ಸಕಾರಾತ್ಮಕವಾಗಿಯೇ ಯೋಚಿಸಬೇಕು, ಪ್ರಪಂಚವು ವಿಶಾಲವಾಗಿದೆ ಅವಕಾಶಗಳ ಆಗರವಾದ ಈ ವಿಶಾಲ ಪ್ರಪಂಚದಲ್ಲಿ ದೊಡ್ಡ ಗುರಿಯನ್ನಿಟ್ಟುಕೊಂಡು ಸಾಧನೆಯೆಡೆಗೆ ಅವಿರತವಾಗಿ ಶ್ರಮವಹಿಸಬೇಕು, ಎಲ್ಲಾ ರೀತಿಯ ಸೌಲಭ್ಯಗಳಿರುವ ಈ ಕಾಲದಲ್ಲಿ ನಾವು ಅವಕಾಶಗಳನ್ನು ಸದುಪಯೋಗಪಡಸಿಕೊಂಡು ಯಶಸ್ವೀ ವ್ಯಕ್ತಿಗಳಾಗಬೇಕು” ಎಂದು ಹೇಳಿದರು.

ವೇದಿಕೆಯಲ್ಲಿ ಭಾಲಾವಲೀಕರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಸುನಿಲ್ ಬೋರ್ಕರ್ ಉಪಸ್ಥಿತರಿದ್ದರು. ಸುಮಾರು 100 ಜನ ವಿದ್ಯಾರ್ಥಿಗಳು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತರಬೇತಿಯನ್ನು ಪಡೆದುಕೊಂಡರು. ಕುಮಾರಿ ಸಿಂಧು ಪ್ರಭು ಮತ್ತು ಅಮೃತಾಂಬ ಅವರ ವೇದಮಂತ್ರದೊಂದಿಗೆ ಕಾರ್ಯಕ್ರಮ ಮೊದಲ್ಗೊಂಡಿತು. ಸರಸ್ವತಿ ಚಾರಿಟೇಬಲ್ ಟ್ರಸ್ಟ್ ನ ಸಾರ್ವಜನಿಕ ಸಂಪರ್ಕಾಧಿಕಾರಿ  ಬಿಪಿನ್ ಚಂದ್ರ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

16 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

16 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

17 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

17 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

17 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

2 days ago