ಧರ್ಮಸ್ಥಳ: ಸೇವಕರ ತಂಡ “ಶ್ರೀ ಜನಾರ್ದನ ಸ್ವಾಮಿ ಸೇವಾ ಸಮಿತಿ” ವತಿಯಿಂದ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ ಸ್ವಚ್ಛತಾ ಕಾರ್ಯವನ್ನು ಮಾಡಿದರು. ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸ್ವಚ್ಛತೆ ನಡೆಸಿ 6 ಲೋಡ್ ಬಟ್ಟೆ ತ್ಯಾಜ್ಯ, 2 ಲೋಡ್ ಕಟ್ಟಿಗೆ ಹಾಗೂ 8 ಲೋಡ್ ತ್ಯಾಜ್ಯ ತೆರವುಗೊಳಿಸಲಾಯಿತು.
ಉಜಿರೆಯಲ್ಲಿ ಕಳೆದ ಜ.21 ರಂದು ಉಜಿರೆ ಜಾತ್ರೆ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆಗೊಂಡ ಈ ಸ್ವಚ್ಛತಾ ತಂಡದಲ್ಲಿ 600 ಮಂದಿ ಇದ್ದಾರೆ. ಕಳೆದ ಜೂನ್ ತಿಂಗಳಿನಲ್ಲಿ ಮುಂಡಾಜೆ, ಚಾರ್ಮಾಡಿ ಪರಿಸರದಲ್ಲಿ ನೆರೆಪೀಡಿತರಿಗೆ ಸಂಕಷ್ಟದ ಸಂದರ್ಭ ಸಹಕರಿಸಿದ ತಂಡ ಪ್ರಾಕೃತಿಕ ವಿಕೋಪಗಳು ಮುಂದೆ ಸಂಭವಿಸಿದಾಗ ನೆರವು ನೀಡಲು ಹಾಗೂ ಸೇವೆ ನೀಡಲು 600 ಜನರ ವ್ಯವಸ್ಥಿತ ಸ್ವಯಂ ಸೇವಕರತಂಡವನ್ನು ರಚಿಸಿದೆ. ಸೇವಾ ಸಮಿತಿಯ ಪ್ರಥಮ ಸೇವೆಯಾಗಿ ಭಾನುವಾರ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ ಸ್ವಚ್ಛತಾಕಾರ್ಯವನ್ನು 500 ಮಂದಿ ಸ್ವಯಂ ಸೇವಕರತಂಡದವರು ಪ್ರಥಮ ಸೇವೆಯಾಗಿ ಮಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್, ಡಾ. ಬಿ. ಯಶೋವರ್ಮ ಭೇಟಿ ನೀಡಿ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಉಜಿರೆಯ ಹಿರಿಯ ಸಮಾಜ ಸೇವಾಕರ್ತರಾಮಚಂದ್ರ ಶೆಟ್ಟಿ ಸ್ವಚ್ಛತಾಕಾರ್ಯ ಉದ್ಘಾಟಿಸಿದರು. ಶರತ್‍ಕೃಷ್ಣ ಪಡ್ವೆಟ್ನಾಯ, ಅನ್ನಪೂರ್ಣಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ಉಜಿರೆಯ ಉದ್ಯಮಿರಾಜೇಶ್ ಪೈ ಹಾಗೂ ಮೋಹನ ಕುಮಾರ್ ನೇತೃತ್ವದಲ್ಲಿ ಸ್ವಚ್ಛತಾ ಸೇವೆ ನಡೆಯಿತು.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…