ಧರ್ಮಸ್ಥಳ: ವಾಚನ-ಪ್ರವಚನ ಕಾರ್ಯಕ್ರಮದಲ್ಲಿ ಪುರಾಣ ಗ್ರಂಥಗಳಿಂದ ವೈವಿಧ್ಯಮಯ ಅಮೂಲ್ಯ ವಿಚಾರಗಳನ್ನು ಅಳವಡಿಸಿದ್ದು ವಾಚನ-ಪ್ರವಚನ ಮಾಡಿದವರಿಗೂ, ಶ್ರೋತೃಗಳಿಗೂ ತುಂಬಾ ಪ್ರಯೋಜನವಾಗಿದೆ. ಧರ್ಮ ಪ್ರಭಾವನೆಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಮಂಗಳವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ 64 ದಿನಗಳಲ್ಲಿ ಪ್ರತಿ ದಿನ ಸಂಜೆ ಗಂಟೆ 6.30ರಿಂದ 8.00 ಗಂಟೆ ವರೆಗೆ ವಾಚನ-ಪ್ರವಚನ ಮಾಡಿದ ವಿದ್ವಾಂಸರನ್ನುಅವರು ಗೌರವಿಸಿ ಮಾತನಾಡಿದರು. ಸಾರ್ವಜನಿಕ ಧಾರ್ಮಿಕ ಸಮಾರಂಭಗಳಲ್ಲಿ ಕನಿಷ್ಠ ಒಂದು ಗಂಟೆ ಅವಧಿಯ ವಾಚನ-ಪ್ರವಚನ ಕಾರ್ಯಕ್ರಮ ಅಳವಡಿಸಬೇಕು ಎಂದು ಅವರು ಸಲಹೆ ನೀಡಿದರು. ಹರಿಕಥೆ, ಶಾಸ್ತ್ರೀಯ ಸಂಗೀತ, ಯಕ್ಷಗಾನ ಮೊದಲಾದಆಧ್ಯಾತ್ಮಿಕ ಪ್ರಭಾವನಾ ಕಾರ್ಯಕ್ರಮಗಳು ಕಡಿಮೆಯಾಗುತ್ತಿರುವ ಬಗ್ಯೆಅವರು ಕಳವಳ ವ್ಯಕ್ತಪಡಿಸಿದರು.ಹೇಮಾವತಿ ವೀ, ಹೆಗ್ಗಡೆಯವರು ಉಪಸ್ಥಿತರಿದ್ದರು.
ಶ್ರೀನಿವಾಸ ರಾವ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.