ಧರ್ಮಸ್ಥಳ: ದೇವರ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಸರಳ ಮಾಧ್ಯಮವಾಗಿದೆ. ಭಜನಾ ಸಂಸ್ಕೃತಿಯಿಂದ ಸಭ್ಯ, ಸುಸಂಸ್ಕೃತ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ ಹೇಳಿದರು.
ಅವರು ರ ಧರ್ಮಸ್ಥಳದಲ್ಲಿ 21 ನೇ ವರ್ಷದ ಭಜನಾತರಬೇತಿ ಶಿಬಿರ ಮತ್ತು ಸಂಸ್ಕೃತಿ ಸಂವರ್ಧನಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಮುನುಷ್ಯಜನ್ಮ ಶ್ರೇಷ್ಠ ಅವಕಾಶವಾಗಿದ್ದು ಸತ್ಯ, ಸದಾಚಾರ ಮತ್ತು ಸತ್ಕಾರ್ಯಗಳೊಂದಿಗೆ ಸಾರ್ಥಕಜಿವನ ನಡೆಸಬೇಕು.ನವವಿಧ ಭಕ್ತಿಯಿಂದದೆವರ ಸ್ತುತಿ, ಆರಾಧನೆ ಮಾಡಬೇಕು. ದುಶ್ಚಟಗಳಿಂದ ದೂರವಿದ್ದು ಸತ್ಸಂಗದಿಂದ ಭಜನೆ ಮೂಲಕ ಉತ್ತಮಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.
ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಭಜನೆಯಿಂದ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯಾಗಿ ಸಾಮಾಜಿಕ ಪರಿವರ್ತನೆಯಾಗಬೇಕು.ಗ್ರಾಮಗಳಲ್ಲಿ ಸ್ವಚ್ಛತೆಯೊಂದಿಗೆಉತ್ತಮ ಸಂಸ್ಕಾರ ಮೂಡಿ ಬರಬೇಕು.ಭಜನಾ ಪಟುಗಳು ಆದರ್ಶ ನಾಯಕತ್ವದೊಂದಿಗೆಊರಿನ ಸರ್ವತೋಮುಖ ಪ್ರಗತಿಯ ರೂವಾರಿಗಳಾಗಬೇಕು ಎಂದು ಹೆಗ್ಗಡೆಯವರು ಕಿವಿ ಮಾತು ಹೇಳಿದರು.
ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೆಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಭಜನಾತರಬೇತಿ ಶಿಬಿರದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಕಾರ್ಯದರ್ಶಿ ಮಮತಾರಾವ್‍ಧನ್ಯವಾದವಿತ್ತರು. ಶ್ರೀನಿವಾಸ ರಾವ್‍ಕಾರ್ಯಕ್ರಮ ನಿರ್ವಹಿಸಿದರು.
ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ…
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…
ನಾವೊಂದು ಯೋಚನೆ ಮಾಡಿದ್ದೇವೆ. ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…