ಧಾರ್ಮಿಕ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸನ್ಮಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉಜಿರೆ: ಭಕ್ತರ ದೋಷಗಳನ್ನು ಗ್ರಹಣ ಮಾಡಿ, ಸಂಕಷ್ಟಗಳನ್ನು ಪರಿಹರಿಸುವ ಶಕ್ತಿ ಹೊಂದಿರುವ ಸಾನ್ನಿಧ್ಯಗಳು ತೀರ್ಥಕ್ಷೇತ್ರಗಳಾಗಿ ಬೆಳಗುತ್ತವೆ, ಬೆಳೆಯುತ್ತವೆ. ಸಾರ್ಥಕ ಬದುಕಿಗೆ ದಾರಿದೀಪವಾಗುತ್ತವೆ. ತಮ್ಮಲ್ಲಿರುವ ಕೋಪ, ದ್ವೇಷ, ಅಸೂಯೆ ಮೊದಲಾದ ಅರಿಷಡ್ವರ್ಗಗಳನ್ನು ಕಳಚಿ, ದುಃಖ, ದುಮ್ಮಾನಗಳನ್ನು ಮರೆಯಲು ಧರ್ಮಸ್ಥಳ ಕ್ಷೇತ್ರಕ್ಕೆ ಭಕ್ತರು ಬರುತ್ತಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

Advertisement

ಅವರು ಗುರುವಾರ ರಾತ್ರಿ ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆಗೆ ಬಂದ ಪಾದಯಾತ್ರಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಶಿವ ಭಕ್ತರ ಸರ್ವ ದೋಷಗಳನ್ನು ಸ್ವೀಕರಿಸಿ “ವಿಷಕಂಠ”ನಾಗಿ ಭಕ್ತರ ಅಭೀಷ್ಠಗಳನ್ನು ಈಡೇರಿಸಿ ಮಂಗಳಕಾರಕನಾಗಿಯೂ ಸದಾ ಭಕ್ತರನ್ನುಅನುಗ್ರಹಿಸುತ್ತಾರೆ.
ನೇತ್ರಾವತಿ ನದಿಯಲ್ಲಿ ಮಿಂದು ಬಹಿರಂಗ ಪರಿಶುದ್ಧಿಯೊಂದಿಗೆ, ಉಪವಾಸ, ವ್ರತ-ನಿಯಮಗಳ ಪಾಲನೆಯೊಂದಿಗೆ ಅಂತರಂಗ ಶುದ್ಧಿಯಿಂದ ದೇವರನ್ನು ಪ್ರಾರ್ಥಿಸಿದಾಗ ಸಕಲ ದೋಷಗಳ ನಿವಾರಣೆಯಾಗಿ ಶಾಂತಿ, ನೆಮ್ಮದಿ ನೆಲೆಸುತ್ತದೆ. ಪ್ರಸ್ತುತ ಮೊಬೈಲ್ ಫೋನ್‍ ಕಾಟದಿಂದ ಜಪ, ತಪ, ಪ್ರಾರ್ಥನೆ, ಧ್ಯಾನಕ್ಕೂಅಡಚಣೆಯಾಗುತ್ತಿದೆ. ಮನಸ್ಸಿನಲ್ಲಿ ಏಕಾಗ್ರತೆ ಇರುವುದಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಹಿತ-ಮಿತವಾಗಿ ಮೊಬೈಲ್ ಬಳಸಿ ಎಂಬ ಕಿವಿಮಾತನ್ನೂ ಹೇಳಿದರು.

ಅನೇಕ ಮಂದಿ ಪಾದಯಾತ್ರಿಗಳು ಒಂದೆರಡು ದಿನ ಮುಂಚಿತವಾಗಿ ಬಂದು ದೇವರ ದರ್ಶನ ಮಾಡಿ ಇತರ ಭಕ್ತರಿಗೆ ಅನುಕೂಲ ಮಾಡಿದ್ದಾರೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಪಾದಯಾತ್ರಿಗಳಲ್ಲಿರುವ ಶಿಸ್ತು, ಸಂಯಮ, ಸ್ವಚ್ಛತೆ ಬಗ್ಗೆ ಕಾಳಜಿ ಇತ್ಯಾದಿಗಳನ್ನು ಹೆಗ್ಗಡೆಯವರು ಶ್ಲಾಘಿಸಿ ಎಲ್ಲರಿಗೂ ಪಾದಯಾತ್ರೆಯ ಫಲ ಸಿಗಲಿ. ಮಳೆ-ಬೆಳೆ ಚೆನ್ನಾಗಿ ಆಗಲಿ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿ ನೆಲೆಸಲಿ ಹಾಗೂ ಲೋಕಕಲ್ಯಾಣವಾಗಲಿ ಎಂದು ಅವರು ಹಾರೈಸಿದರು.

ಪಾದಯಾತ್ರಿಗಳ ತಂಡದ ನಾಯಕ ಬೆಂಗಳೂರಿನ ಹನುಮಂತಪ್ಪ ಸ್ವಾಮೀಜಿ ಮತ್ತು ಶಶಿಕುಮಾರ್ ಹಾಗೂ ಇತರರನ್ನು ಹೆಗ್ಗಡೆಯವರು ಗೌರವಿಸಿದರು. ಹನುಂತಪ್ಪ ಸ್ವಾಮೀಜಿ ಮಾತನಾಡಿ ಮುಂದಿನ ವರ್ಷ ಆಯಾ ಊರುಗಳಲ್ಲೆ ಪಾದಯಾತ್ರಿಗಳ ತಂಡ ರಚಿಸಿ, ಸುಗಮ ಪಾದಯಾತ್ರೆ ಮಾಡಬೇಕು ಎಂದು ಸಲಹೆ ನೀಡಿದರು. ಹೇಮಾವತಿ ವಿ. ಹೆಗ್ಗಡೆಯವರು, ನಾಗರಾಜರೆಡ್ಡಿ ಮತ್ತು ಮರಿಯಪ್ಪಗುರು ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

24 hours ago

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

1 day ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

1 day ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

1 day ago