ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಶಿವನಾಮ ಪಂಚಾಕ್ಷರಿ ಪಠಣದೊಂದಿಗೆ ಅಹೋರಾತ್ರಿ ಜಾಗರಣೆ

February 21, 2020
10:19 PM

ಉಜಿರೆ: ಮೊದಲು ನಮ್ಮನ್ನು ನಾವು ಅರಿತುಕೊಂಡು, ಮನ-ವಚನ-ಕಾಯದಿಂದ ಪರಿಶುದ್ಧರಾಗಿ, ದೃಢಭಕ್ತಿ ಮತ್ತು ಅಚಲ ವಿಶ್ವಾಸದಿಂದ ದೇವರ ನಾಮಸ್ಮರಣೆ ಮಾಡಿ ಸಾರ್ಥಕ ಜೀವನ ನಡೆಸಬೇಕು. ಆಚಾರವೇ ಶ್ರೇಷ್ಠವಾದ ಧರ್ಮ, ಅಭಯದಾನವೇ ಶ್ರೇಷ್ಠವಾದ ದಾನವಾಗಿದೆ. ಧರ್ಮಸ್ಥಳವು ಜಾತಿ – ಮತ ಬೇಧವಿಲ್ಲದೆ ಸಕಲ ಭಕ್ತರಿಗೂ “ಎಂದೂ ಭಯಪಡಬೇಡಿ” ಎಂದು ಸದಾ ಅಭಯದಾನ ನೀಡುವ ಪವಿತ್ರ ಕ್ಷೇತ್ರವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

Advertisement
Advertisement
Advertisement

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶಿವರಾತ್ರಿ ಸಂದರ್ಭದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ನಡೆಯುವ ಶಿವನಾಮ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ನಂದಾದೀಪ ಬೆಳಗಿಸಿ ಶುಭ ಹಾರೈಸಿ ಮಾತನಾಡಿದರು.

Advertisement

ಎಲ್ಲರೂ ಅಂತರಂಗ ದರ್ಶನ ಮಾಡಿಕೊಂಡು ಸಂಯಮದಿಂದ ಹಂಸಕ್ಷೀರ ನ್ಯಾಯದಂತೆ ಸದಾ ಸತ್ಕಾರ್ಯಗಳನ್ನು ಮಾಡಿ ಪುಣ್ಯ ಸಂಚಯ ಮಾಡಬೇಕು. ಕೆಟ್ಟ ಕೆಲಸಗಳಿಂದ ಪಾಪಬಂಧವಾದರೆ, ಸತ್ಕಾರ್ಯಗಳಿಂದ ಪುಣ್ಯ ಸಂಚಯವಾಗುತ್ತದೆ. ಎಲ್ಲರೂ ಸತ್ಯ, ಧರ್ಮ, ನ್ಯಾಯ ಮತ್ತು ನೀತಿಯ ಹಾದಿಯಲ್ಲಿ ನಡೆದಾಗ ಎಲ್ಲೆಲ್ಲೂ ಶಾಂತಿ, ನೆಮ್ಮದಿಯಿಂದ ಲೋಕ ಕಲ್ಯಾಣವಾಗುತ್ತದೆ. ನಮ್ಮಲ್ಲಿರುವ ಅರಿಷಡ್ವರ್ಗಗಳನ್ನು ತ್ಯಜಿಸಿ ನಡೆ-ನುಡಿ, ವ್ಯವಹಾರವನ್ನು ಧರ್ಮದ ನೆಲೆಯಲ್ಲಿ ಮಾಡಬೇಕು. ಮಾತೇ ಮಾಣಿಕ್ಯವಾಗಬೇಕು. ಆದುದರಿಂದಲೇ “ಮಾತು ಬಿಡ ಮಂಜುನಾಥ” ಎಂಬ ಮಾತು ಧರ್ಮಸ್ಥಳಕ್ಕೆ ಸಂಬಂಧಪಟ್ಟಂತೆ ಪ್ರಚಲಿತವಿದೆ. ಆದುದರಿಂದಲೇ ಇಲ್ಲಿ ವಾಕ್‍ದೋಷ ಪರಿಹಾರ, ವಾಕ್‍ತಿರ್ಮಾನ, ಆಣೆಮಾತು ತೀರ್ಮಾನ ಮೊದಲಾದ ಪರಿಹಾರ ವಿಧಾನಗಳಿವೆ. ಭಕ್ತರ ದೋಷಗಳನ್ನೆಲ್ಲ ದೇವರಿಗೆ ಅರ್ಪಿಸಿ ತಮ್ಮ ತಪ್ಪನ್ನು ಅರಿತು, ತಿದ್ದಿಕೊಂಡು ನವ ಜೀವನ ನಡೆಸುವ ಸದವಕಾಶವನ್ನು ಅಭಯದಾನದ ಮೂಲಕ ನೀಡಲಾಗುತ್ತದೆ.

Advertisement

ಆಹಾರ, ನಿದ್ರೆ ಮತ್ತು ಭಯ – ಎಲ್ಲಾ ಪ್ರಾಣಿಗಳಿಗೂ ಸಹಜ ಕ್ರಿಯೆಯಾದರೂ ವಿವೇಕ ಶೀಲರಾದ ಮನುಷ್ಯರು ಎಲ್ಲಾ ವ್ಯವಹಾರಗಳನ್ನು ಸತ್ಯ, ಧರ್ಮ ಮತ್ತು ನ್ಯಾಯದ ನೆಲೆಯಲ್ಲಿ ಮಾಡಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

Advertisement

ಶ್ರೀ ಮಂಜುನಾಥ ಸ್ವಾಮಿಗೆ ಸಾಮೂಹಿಕ ನಮನಗಳನ್ನು ಸಮರ್ಪಿಸಿ, ಓಂಕಾರ, ಮೂರು ಬಾರಿ ಶಂಖನಾದ ಹಾಗೂ ಹತ್ತು ನಿಮಿಷ ಎಲ್ಲರೂ ಸಾಮೂಹಿಕ ಮೌನಧ್ಯಾನ ಮಾಡಿದ ಬಳಿಕ ಹೆಗ್ಗಡೆಯವರು ಜ್ಯೋತಿ ಬೆಳಗಿಸಿ ಶಿವ ಪಂಚಾಕ್ಷರಿ ಆಹೋ ರಾತ್ರಿ ಪಠಣಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಮಾಣಿಲದ ಮೋಹನದಾಸ ಸ್ವಾಮೀಜಿ, ಬೆಂಗಳೂರಿನ ಪಾದಯಾತ್ರಿಗಳ ಸಂಘದ ನಾಯಕ ಹನುಮಂತಪ್ಪ, ಮರಿಸ್ವಾಮಿ ಮತ್ತು ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾಸನಾಂಬೆ ಹುಂಡಿ ಎಣಿಕೆ | 12.63 ಕೋಟಿ ರೂಪಾಯಿ ಕಾಣಿಕೆ ಸಂಗ್ರಹ |
November 5, 2024
7:44 AM
by: The Rural Mirror ಸುದ್ದಿಜಾಲ
ಶಬರಿಮಲೆ | ಮಂಡಲ ಪೂಜೆ | ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ
November 3, 2024
7:12 AM
by: The Rural Mirror ಸುದ್ದಿಜಾಲ
ಕೂಡ್ಲಿಗಿ | ಪಂಡರಾಪುರ ಶ್ರೀಪಾಂಡುರಂಗ ದರ್ಶನಕ್ಕೆ ಭಕ್ತರ ಪಾದಯಾತ್ರೆ |
November 3, 2024
6:33 AM
by: The Rural Mirror ಸುದ್ದಿಜಾಲ
ಬೆಳಕಿನ ಹಬ್ಬ ದೀಪಾವಳಿ | ಮಾರುಕಟ್ಟೆಯಲ್ಲಿ ವಿವಿಧ ವಿನ್ಯಾಸದ ಹಣತೆ | ಗ್ರಾಹಕರ ಮನಸೆಳೆಯುತ್ತಿರುವ ಮಣ್ಣಿನ ಹಣತೆ |
October 31, 2024
7:14 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror