ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವಕ್ಕೆ ಪೂರ್ವಭಾವಿಯಾಗಿ ಬುಧವಾರ ಸ್ವಚ್ಛತಾ ಅಭಿಯಾನ ನಡೆಯಿತು. 114 ಮಂದಿ ಸ್ವಯಂ ಪ್ರೇರಣೆಯಿಂದ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10ರ ವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಸಿ 292 ಗೋಣಿ ಕಸ ಸಂಗ್ರಹಿಸಿದರು.
ಬಳಿಕ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ ಹೇಮಾವತಿ ವಿ.ಹೆಗ್ಗಡೆಯವರು ಮಾತನಾಡಿ, ಕಸ ಎಸೆದು ಸ್ವಚ್ಛತಾ ಕಾರ್ಯಕ್ರಮ ಮಾಡುವುದಕ್ಕಿಂತ ಕಸ ಎಸೆಯದಂತೆ ದೃಢ ಸಂಕಲ್ಪ ಮಾಡಿ ಮುಂಜಾಗರೂಕತೆ ವಹಿಸಬೇಕು. ಶಾಲಾ-ಕಾಲೇಜುಗಳ ಪಠ್ಯದಲ್ಲಿಯೇ ಸ್ವಚ್ಛತೆಯ ಪಾಠ ಕಲಿಸಬೇಕು ಎಂದು ಸಲಹೆ ನೀಡಿದರು. ಕಸ ಎಸೆದವನಿಂದಲೇ ಕಸ ಹೆಕ್ಕುವ ಅಭಿಯಾನ ಆರಂಭಿಸಿದಲ್ಲಿ ನಮ್ಮ ಪರಿಸರ ಸ್ವಚ್ಛವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಸುಪ್ರಿಯಾ ಹರ್ಷೇಂದ್ರಕುಮಾರ್, ಮನುಷ್ಯರಿಂದಾಗಿಯೇ ಪರಿಸರಕ್ಕೆ ಹಾನಿಯಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು, ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್, ಯೋಜನಾಧಿಕಾರಿ ಪ್ರವೀಣ್, ನಿರ್ದೇಶಕ ಲಕ್ಷ್ಮಣ್ ಮತ್ತು ಶ್ರೀನಿವಾಸ ರಾವ್ ಧರ್ಮಸ್ಥಳ ಉಪಸ್ಥಿತರಿದ್ದರು.
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…