ಧರ್ಮಸ್ಥಳ: ರಾಜಸ್ತಾನದ ವಿಶ್ವಗುರು ಮಹಾಮಂಡಲೇಶ್ವರ ಪರಮಹಂಸ ಸ್ವಾಮಿ ಮಹೇಶ್ವರಾನಂದಜಿ ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ 1972ರ ಮೋಡೆಲ್ ಮರ್ಸಿಡಿಸ್ ಬೆನ್ಜ್ ಕಾರನ್ನುಕೊಡುಗೆಯಾಗಿ ನೀಡಿದರು. 280 ಎಸ್. ಮಾದರಿಯ ಈ ಕಾರು ಅತ್ಯುತ್ತಮ ಕಾರು ಎಂದು ತಿಳಿದು ಬಂದಿದೆ. ಸ್ವಾಮೀಜಿಯವರು ಕಾರಿನ ಕೀ ಹಸ್ತಾಂತರಿಸುವ ಮೂಲಕ ಕಾರನ್ನುಕೊಡುಗೆಯಾಗಿ ನೀಡಿದರು.
ಕೆಲವು ವರ್ಷಗಳ ಹಿಂದೆಜಾಗತಿಕ ಯೋಗ ಸಮ್ಮೇಳನ ಉದ್ಘಾಟಿಸಲು ಸ್ವಾಮೀಜಿ ಧರ್ಮಸ್ಥಳಕ್ಕೆ ಬಂದಾಗ ಇಲ್ಲಿನ ಕಾರ್ ಮ್ಯೂಸಿಯಂ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆಯವರು ಸ್ವಾಮೀಜಿಯವರನ್ನು ಗೌರವಿಸಿದರು.
ಸ್ವಾಮೀಜಿ ಯುರೋಪ್ ಖಂಡದ ಆಸ್ಟ್ರೀಯಾ ದೇಶದಲ್ಲಿ ತಮ್ಮ ಆಶ್ರಮ ಪ್ರಾರಂಭಿಸಿ ಅಲ್ಲಿ ಯೋಗ ಪ್ರಚಾರ ಮತ್ತು ಧರ್ಮ ಪ್ರಭಾವನಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೆಗ್ಗಡೆಯವರು ಕಾರು ಚಾಲನೆ ಮಾಡಿದರು. ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…