ಉಜಿರೆ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶುಕ್ರವಾರ ಪ್ರಾಂಭಗೊಳ್ಳುತ್ತವೆ.
ಪ್ರೌಢಶಾಲಾ ವಠಾರದಲ್ಲಿ ಶುಕ್ರವಾರ ಸಂಜೆ ಐದು ಗಂಟೆಗೆ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆಯಾಗುತ್ತದೆ. ಆರೋಗ್ಯ, ಶಿಕ್ಷಣ, ಕಲೆ, ಸಾಹಿತ್ಯ, ಜೀವವಿಮಾ ನಿಗಮ, ಬ್ಯಾಂಕ್‍ಗಳು, ಗ್ರಾಮೀಣ ಗುಡಿ ಕೈಗಾರಿಕೆಗಳಿಗೆ ಸಂಬಂಧಿಸಿದ ಮುನ್ನೂರಕ್ಕೂ ಮಿಕ್ಕಿ ಮಳಿಗೆಗಳಿವೆ.
ಪ್ರತಿದಿನ 9 ರ ವರೆಗೆ ವಸ್ತು ಪ್ರದರ್ಶನಕ್ಕೆ ಉಚಿತ ಪ್ರವೇಶಾವಕಾಶವಿದೆ. ಪ್ರತಿ ದಿನ ಸಂಜೆ ಗಂಟೆ 7ರ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿವೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಹೊಸಕಟ್ಟೆ ಉತ್ಸವ ನಡೆಯಲಿದೆ.
ಪಾದಯಾತ್ರೆ: ಶುಕ್ರವಾರ ಸಂಜೆ 3 ಗಂಟೆಗೆ ಉಜಿರೆಯಲ್ಲಿರುವ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಹತ್ತು ಸಾವಿರ ಮಂದಿ ಭಕ್ತರು ಹಾಗೂ ಸಾರ್ವಜನಿಕರು ಪಾದಯಾತ್ರೆಯಲ್ಲಿ ಹೊರಟು 6 ಗಂಟೆಗೆ ಧರ್ಮಸ್ಥಳ ತಲುಪುವರು. ದೇವರದರ್ಶನ ಬಳಿಕ ಅಮೃತವರ್ಷಿಣಿ ಸಭಾ ಭವನದಲ್ಲಿ ಸಂಜೆ 7 ಗಂಟೆಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪಾದಯಾತ್ರಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.