ಧರ್ಮಸ್ಥಳ: ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಾಳೆಯಿಂದ ಶುಭಾರಂಭ

November 20, 2019
9:53 PM

ಉಜಿರೆ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶುಕ್ರವಾರ ಪ್ರಾಂಭಗೊಳ್ಳುತ್ತವೆ.

ಪ್ರೌಢಶಾಲಾ ವಠಾರದಲ್ಲಿ ಶುಕ್ರವಾರ ಸಂಜೆ ಐದು ಗಂಟೆಗೆ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆಯಾಗುತ್ತದೆ. ಆರೋಗ್ಯ, ಶಿಕ್ಷಣ, ಕಲೆ, ಸಾಹಿತ್ಯ, ಜೀವವಿಮಾ ನಿಗಮ, ಬ್ಯಾಂಕ್‍ಗಳು, ಗ್ರಾಮೀಣ ಗುಡಿ ಕೈಗಾರಿಕೆಗಳಿಗೆ ಸಂಬಂಧಿಸಿದ ಮುನ್ನೂರಕ್ಕೂ ಮಿಕ್ಕಿ ಮಳಿಗೆಗಳಿವೆ.

ಪ್ರತಿದಿನ  9 ರ ವರೆಗೆ ವಸ್ತು ಪ್ರದರ್ಶನಕ್ಕೆ ಉಚಿತ ಪ್ರವೇಶಾವಕಾಶವಿದೆ. ಪ್ರತಿ ದಿನ ಸಂಜೆ ಗಂಟೆ 7ರ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿವೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಹೊಸಕಟ್ಟೆ ಉತ್ಸವ ನಡೆಯಲಿದೆ.

ಪಾದಯಾತ್ರೆ: ಶುಕ್ರವಾರ ಸಂಜೆ 3 ಗಂಟೆಗೆ ಉಜಿರೆಯಲ್ಲಿರುವ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಹತ್ತು ಸಾವಿರ ಮಂದಿ ಭಕ್ತರು ಹಾಗೂ ಸಾರ್ವಜನಿಕರು ಪಾದಯಾತ್ರೆಯಲ್ಲಿ ಹೊರಟು 6 ಗಂಟೆಗೆ ಧರ್ಮಸ್ಥಳ ತಲುಪುವರು. ದೇವರದರ್ಶನ ಬಳಿಕ ಅಮೃತವರ್ಷಿಣಿ ಸಭಾ ಭವನದಲ್ಲಿ ಸಂಜೆ 7 ಗಂಟೆಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪಾದಯಾತ್ರಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror