Advertisement
ಸುದ್ದಿಗಳು

ನಗರದ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಶಾಸಕ ಅಂಗಾರ ಸೂಚನೆ

Share

ಸುಳ್ಯ:  ಸುಳ್ಯ ನಗರದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಸ್‌.ಅಂಗಾರ ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಅವರಿಗೆ ಸೂಚನೆ ನೀಡಿದ್ದಾರೆ.

ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಆಧಿಕಾರಿಗಳನ್ನು ಕರೆಸಿ ಶಾಸಕರು ಮಾತುಕತೆ ನಡೆಸಿದರು. ನಗರದ ಬೀದಿದೀಪ ಸಮಸ್ಯೆ, ಸ್ವಚ್ಛತೆ, ಅನಧಿಕೃತ ಬ್ಯಾನರ್, ಕುಡಿಯುವ ನೀರು, ಚರಂಡಿ ರಿಪೇರಿ ಇತ್ಯಾದಿ ತುರ್ತು ಕೆಲಸಗಳನ್ನು ಕೂಡಲೇ ಮಾಡಬೇಕು. ನೂತನ ಚುನಾಯಿತ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ಬಿಜೆಪಿ ನಗರಾಧ್ಯಕ್ಷ ಮತ್ತು ನ ಪಂ ಸದಸ್ಯ ವಿನಯ್ ಕುಮಾರ್ ಕಂದಡ್ಕ, ನಗರ ಕಾರ್ಯದರ್ಶಿ ಹರೀಶ್ ಬೂಡುಪನ್ನೆ, ಬೂಡು ರಾಧಾಕೃಷ್ಣ ರೈ ನ.ಪಂ ಸದಸ್ಯರು, ನಗರ ಪಂಚಾಯತ್ ಇಂಜಿನಿಯರ್ ಶಿವಕುಮಾರ್ ಉಪಸ್ಥಿತರಿದ್ದು ಸದಸ್ಯರು ವಿವಿಧ ವಾರ್ಡ್ ಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಸಕರ ಮತ್ತು ಅಧಿಕಾರಿಗಳ ಗಮನಕ್ಕೆ ತಂದರು.

ಕುಡಿಯುವ ನೀರಿನ ಟ್ಯಾಂಕ್ ಗಳ ಸ್ವಚ್ಛತೆ ಕಾಪಾಡಲು, ಮನೆಗಳಿಂದ ಕಸವನ್ನು ಬೇರ್ಪಡಿಸಿ ಶೇಖರಿಸಲು ಸೂಚಿಸಲಾಯಿತು. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಕಸವನ್ನು ಬೇರ್ಪಡಿಸಿ ನೀಡದಿದ್ದರೆ ಸಂಗ್ರಹಿಸುವುದು ಬೇಡ ಎಂದು ಸದಸ್ಯರು ಸಲಹೆ ನೀಡಿದರು. ಈ ಕುರಿತು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

20 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

21 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

21 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago