ಸುಳ್ಯ: ಇಂದು ರಾಜಕೀಯದಲ್ಲಿ ನೈತಿಕತೆ ಎಂಬುದು ಇಲ್ಲ. ಯಾವ ರೀತಿಯಲ್ಲಿ ಬೇಕಾದರೂ ಅಧಿಕಾರ ಹಿಡಿಯುವುದಸ್ಟೇ ರಾಜಕೀಯ. ರಾಜ್ಯದಲ್ಲಿ ಅಂತಹಾ ಬೆಳವಣಿಗೆ ಕಂಡು ಬಂದಿದೆ. ಆ ಹಿನ್ನಲೆಯಲ್ಲಿ ಮುಂದೆ ಸುಳ್ಯ ನಗರ ಪಂಚಾಯತ್ ನಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನವನ್ನು ಪಡೆದು ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಕೂಡ ಎಲ್ಲಾ ಪ್ರಯತ್ನವನ್ನೂ ಮಾಡಲಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಹಾಗೂ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆ ಮುಗಿದು ಎರಡು ತಿಂಗಳಾದರೂ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ನಡೆದಿಲ್ಲ. ಸದಸ್ಯರಿಗೆ ಅಧಿಕಾರವೂ ಸಿಕ್ಕಿಲ್ಲ. ಇದರಿಂದ ಜನರಿಗೆ ತೀವ್ರ ತೊಂದರೆ ಉಂಟಾಗುತಿದೆ. ವಾರ್ಡ್ ಗಳಲ್ಲಿ ಹಲವು ಸಮಸ್ಯೆಯಿಂದಾಗಿ ಸಾರ್ವಜನಿಕರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಆದುದರಿಂದ ಸರಕಾರ ಕೂಡಲೇ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ನಡೆಸಿ ನಗರ ಪಂಚಾಯತ್ ಆಡಳಿತವನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು. ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಸಂದರ್ಭದಲ್ಲಿ ಕಾಂಗ್ರೆಸ್ ಕೂಡ ಎಲ್ಲಾ ಪ್ರಯತ್ನ ನಡೆಸಲಿದೆ. ಈಗಾಗಲೇ ಆರು ಸದಸ್ಯರ ಬೆಂಬಲ ಇದೆ, ಇನ್ನು ಐದು ಸದಸ್ಯರ ಬೆಂಬಲ ಪಡೆಯಲು ಸಾಧ್ಯವಾದರೆ ಕಾಂಗ್ರೆಸ್ ಅಧ್ಯಕ್ಷ-ಉಪಾಧ್ಯಕ್ಷರು ಆಯ್ಕೆಯಾಗಲಿದೆ. ಅದಕ್ಕಾಗಿ ಎಲ್ಲಾ ಪ್ರಯತ್ನ ನಡೆಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಧರ್ಮಪಾಲ ಕೊಯಿಂಗಾಜೆ, ನಂದರಾಜ ಸಂಕೇಶ, ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…