Advertisement
ಸುದ್ದಿಗಳು

ನಗರ ಪಂಚಾಯತ್ ನ ಕಸ ತೆರವು ಕಾರ್ಯಾಚರಣೆ ಸ್ಥಗಿತ; ರುಧ್ರಭೂಮಿಯಲ್ಲಿ ಕಸ ಹಾಕಿರುವುದಕ್ಕೆ ಸಾರ್ವಜನಿಕರ ವಿರೋಧ

Share

ಸುಳ್ಯ: ತ್ಯಾಜ್ಯ ಹಾಕಲು ಸ್ಥಳವಿಲ್ಲ ಎಂದು ನಗರ ಪಂಚಾಯಿತಿ ಆವರಣದಲ್ಲಿಯೇ ತುಂಬಿಡಲಾಗಿದ್ದ ತ್ಯಾಜ್ಯವನ್ನು ತೆರವು ಮಾಡುವ ಕಾರ್ಯಾಚರಣೆ ಸ್ಥಗಿತಗೊಂಡಿದೆ‌. ನಗರ ಪಂಚಾಯತ್ ಮುಂಭಾಗದ ಕಟ್ಟದಿಂದ ಕೆಲವು ಲೋಡ್ ಕಸವನ್ನು ಲಾರಿಯಲ್ಲಿ ಸಾಗಾಟ ಮಾಡಲಾಗಿದ್ದರೂ ಎರಡು ದಿನಗಳ ಬಳಿಕ ಅದು ಸ್ಥಗಿತಗೊಂಡಿದೆ. ಈ ಮಧ್ಯೆ ಕೆಲವು ಲೋಡ್ ಕಸವನ್ನು ಜಯನಗರದ ಸ್ಮಶಾನದ ಆವರಣದ ಒಳಗಡೆ ರಾಶಿ ಹಾಕಿದ್ದು ವಿವಾದಕ್ಕೆ ಕಾರಣವಾಗಿದೆ.

ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ನೇತೃತ್ವದಲ್ಲಿ ಸ್ಥಳೀಯರು ಜಮಾಯಿಸಿ ಕಸ ಹಾಕಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಮಶಾನದ ಸ್ಥಳದಲ್ಲಿ ಕಸ ಹಾಕಿ ಮಲಿನಗೊಳಿಸುವುದನ್ನು ತೀವ್ರವಾಗಿ ವಿರೋಧಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಸ್ಮಶಾನದ ಆವರಣದಿಂದ ಕಸವನ್ನು ಕೂಡಲೇ ತೆರವು ಮಾಡಬೇಕು, ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಬಾಲಕೃಷ್ಣ ಭಟ್ ಹೇಳಿದರು. ಜಯನಗರದ ಸ್ಥಳೀಯರು ಕೆಲವರು ಶುಕ್ರವಾರ ಬೆಳಿಗ್ಗೆ ನಗರ ಪಂಚಾಯತ್ ಕಚೇರಿಗೆ ಆಗಮಿಸಿ ಸ್ಮಶಾನದ ಆವರಣದಲ್ಲಿ ಕಸ ಹಾಕಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಕಸ ಹಾಕಿರುವುದು ವಿವಾದ ಆಗಿರುವ ಹಿನ್ನಲೆಯಲ್ಲಿ ನಗರ ಪಂಚಾಯತ್ ಸದಸ್ಯರು ಮತ್ತಿತರ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನಗರದ ಕಸವನ್ನು ನಗರ ಪಂಚಾಯಿತಿ ಮುಂಭಾಗದ ಕಟ್ಟಡದಲ್ಲಿ ತುಂಬಿಟ್ಟ ಕಾರಣ ನಗರ ಪಂಚಾಯಿತಿ ಪರಿಸರ ಅಕ್ಷರಷಃ ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಯಾಗಿತ್ತು. ನಗರ ಪಂಚಾಯಿತಿ ಆವರಣದಲ್ಲಿ ಕಸ ತುಂಬಿಡುವುದು ಭಾರೀ ವಿವಾದ ಸೃಷ್ಟಿಸಿದ ಹಿನ್ನಲೆಯಲ್ಲಿ ನಗರ ಪಂಚಾಯಿತಿ ಕಸ ವಿಲೇವಾರಿಗೆ ಮುಂದಾಗಿದೆ. ಲಾರಿಗಳಲ್ಲಿ ತುಂಬಿ ಕಸವನ್ನು ಬೇರೆಡೆಗೆ ಸಾಗಿಸಿ ವಿಲೇವಾರಿ ಮಾಡಲು ಆರಂಭಿಸಿತ್ತು. ಆದರೆ ಎರಡು ದಿನ ಸಾಗಾಟದ ಬಳಿಕ ಸ್ಥಗಿತಗೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

4 hours ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

4 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

13 hours ago

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

15 hours ago

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ

ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…

15 hours ago

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

16 hours ago