ಸುಳ್ಯ: ಸುಳ್ಯದಿಂದ ಆಲೆಟ್ಟಿ ಮಾರ್ಗವಾಗಿ ಪಾಣತ್ತೂರು, ಬಂದಡ್ಕ ಸಂಪರ್ಕ ಕಲ್ಪಿಸುವ ಅಂತಾರಾಜ್ಯ ರಸ್ತೆ ನಾಗಪಟ್ಟಣ ಸೇತುವೆಯಿಂದ ಕಲ್ಲುಮುಟ್ಲು ರಸ್ತೆಯ ತಿರುವಿನವರೆಗೆ ತೀರಾ ಹದಗೆಟ್ಟು ಸಂಚಾರಕ್ಕೆ ಅಯೋಗ್ಯಕರವಾಗಿದೆ. ಈ ವರ್ಷ ಸುರಿದ ಮಳೆಗೆ ರಸ್ತೆಯೆ ಪೂರ್ತಿ ಹೊಂಡ ಗುಂಡಿಯಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ .
ನ.ಪಂ.ವ್ಯಾಪ್ತಿಯಲ್ಲಿ ಇರುವ ಈ ರಸ್ತೆಯ ಭಾಗ ಗುರುಂಪು ತನಕ ಸಂಪೂರ್ಣ ಕಾಂಕ್ರೀಟೀಕರಣ ಮಾಡಲಾಗಿದೆ. ಅಲ್ಲಿಂದ ಕೇವಲ 400 ಮೀಟರ್ ಉಳಿದ ಭಾಗದ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಿದರೆ ನರಕಯಾತನೆಯ ಸಂಚಾರಕ್ಕೆ ಮುಕ್ತಿ ಸಿಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನಹರಿಸಿ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವಲ್ಲಿ ಮುತುವರ್ಜಿ ವಹಿಸಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗುವಂತೆ ವಾಹನ ಸವಾರರು ಹಾಗೂ ನಾಗರೀಕರು ಆಗ್ರಹಿಸಿರುತ್ತಾರೆ.
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…