ರಾಜ್ಯ

ನದಿ ಉಳಿವಿನ ಯೋಜನೆಗಳಿಗೆ ಸರಕಾರದ ಸಹಕಾರ : ಸಂಸದೆ ಶೋಭಾ ಕರಂದ್ಲಾಜೆ ಭರವಸೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ :ಕಾವೇರಿ ನದಿಯ ಪುನಶ್ಚೇತನ ಸೇರಿದಂತೆ ವಿವಿಧ ನದಿಗಳ ಉಳಿವಿಗಾಗಿ ಈಶಾ ಫೌಂಡೇಶನ್ ಹಮ್ಮಿಕೊಂಡಿರುವ ಯೋಜನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ಸಹಕಾರ ನೀಡಲಿದೆ ಎಂದು ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.

Advertisement
Advertisement

ಈಶಾ ಫೌಂಡೇಶನ್ ವತಿಯಿಂದ ನಗರದ ಕ್ರಿಸ್ಟಲ್ ಹಾಲ್‍ನಲ್ಲಿ ಆಯೋಜಿತ ‘ಕಾವೇರಿ ಕೂಗು’ ಅಭಿಯಾನದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೀವನದಿ ಕಾವೇರಿ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಇದರ ಉಳಿವಿಗಾಗಿ ರಾಜ್ಯ ಸರ್ಕಾರ ಫೌಂಡೇಶನ್‍ನೊಂದಿಗೆ ಒಡಂಬಡಿಕೆಗಳನ್ನು ಮಾಡಲು ಸಿದ್ಧವಿರುವುದಾಗಿ ಅವರು ಸ್ಪಷ್ಟಪಡಿಸಿದರು.ನೆರೆಯ ತಮಿಳುನಾಡಿನ ಜನತೆಗೆ ಕರ್ನಾಟಕದ ಕನ್ನಂಬಾಡಿ ಅಣೆಕಟ್ಟೆಯಿಂದ ತಮಗೆ ನೀರು ಬಿಡುತ್ತಿಲ್ಲವೆನ್ನುವ ಭಾವನೆ ಇದೆ. ಆದರೆ, ಸಾಕಷ್ಟು ಸಂದರ್ಭಗಳಲ್ಲಿ ರಾಜ್ಯದಲ್ಲೆ ನೀರಿನ ಅಭಾವ ತಲೆದೋರಿರುತ್ತದೆಂದು ವಸ್ತು ಸ್ಥಿತಿಯ ಬಗ್ಗೆ ಬೆಳಕು ಚೆಲ್ಲಿದ ಅವರು, ಕಾವೇರಿ ಕೊಳ್ಳದಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ಮರಗಿಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಸುವುದು ಅತ್ಯವಶ್ಯವೆಂದು ಅಭಿಪ್ರಾಯಪಟ್ಟರು.

ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಕಾವೇರಿ ದಿನದಿಂದ ದಿನಕ್ಕೆ ಬತ್ತುತ್ತಿರುವ ಬಗ್ಗೆ ಚಿಂತನೆ ಆಗತ್ಯ. ದಶಕಗಳ ಹಿಂದೆಯೇ ತಾನು ನದಿ ಪಾತ್ರದ ಒತುವರಿಯ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ತಾಪಿಸಿದ್ದೆ. ಆಗ, ಕ್ರಮ ಕೈಗೊಳ್ಳುವ ಭರವಸೆ ದೊರಕಿತ್ತಾದರು, ಇಲ್ಲಿಯವರೆಗೆ ಒತ್ತುವರಿಯನ್ನು ತಡೆಗಟ್ಟುವುದಕ್ಕೆ ಪೂರಕವಾದ ಉತ್ತರ ದೊರಕಿಲ್ಲವೆಂದರು.
ಪ್ರಸ್ತುತ ಅರಣ್ಯದ ಅವಶ್ಯಕತೆಯ ಬಗ್ಗೆ ಕೂಗೇಳುತ್ತಿದೆ. ಆದರೆ, ನಮ್ಮ ಹಿರಿಯರು ಈ ಅಂಶವನ್ನು ಅಂದೇ ಮನಗಂಡು ದೇವರಕಾಡುಗಳನ್ನು ಸಂರಕ್ಷಿಸಿದ್ದರು. ಆದರೆ, ಇಂದು ದೇವರಕಾಡು ಎಲ್ಲಿದೆ ಎಂದು ಹುಡುಕುವಂತಾಗಿದ್ದು, ಇಂತಹ ಪರಿದ್ಥಿತಿಯನ್ನು ನಾವೇ ತಂದು ಕೊಂಡಿರುವುದಾಗಿ ಮಾರ್ಮಿಕವಾಗಿ ಬೇಸರ ವ್ಯಕ್ತಪಡಿಸಿದರು.

ನಿವೃತ್ತ ಏರ್ ಮಾರ್ಷಲ್ ಕೆ.ಸಿ.ನಂದಾ ಕಾರ್ಯಪ್ಪ ಮಾತನಾಡಿ, ಪ್ರಸ್ತುತ ನಮ್ಮ ಸುತ್ತಮುತ್ತಲು ನಡೆಯುತ್ತಿರುವ ವಿದ್ಯಮಾನಗಳಿಂದ ಕೊಡಗಿನ ಪರಿಸರ ಅಪಾರ ಒತ್ತಡಕ್ಕೆ ಒಳಗಾಗಿದೆ. ಇಂತಹ ಪರಿಸ್ಥಿತಿಗಳ ನಡುವೆ ಪಶ್ಚಿಮ ಘಟ್ಟ ಸಾಲುಗಳ ಭವಿಷ್ಯ ಮಂಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇಂತಹ ಪರಿಸ್ಥಿತಿಗಳ ನಡುವೆ ಜಿಲ್ಲೆಗೆ ರೈಲ್ವೆ ಸಂಪರ್ಕದ ಅಗತ್ಯವಿದೆಯೇ ಎನ್ನುವುದನ್ನು ಆಡಳಿತ ನಡೆಸುವವರು ಚಿಂತಿಸಬೇಕೆಂದು ತಿಳಿಸಿದರು.ಪ್ರವಾಸೋದ್ಯಮವೂ ಜಿಲ್ಲೆಯ ಪರಿಸರದ ಮೇಲೆ ಒತ್ತಡವನ್ನು ಸೃಷ್ಟಿಸಿದೆ. ಇಲ್ಲಿ ನಿಯಂತ್ರಿತ ಪ್ರವಾಸೋದ್ಯಮದ ಅಗತ್ಯವಿದೆ. ಪ್ರಸ್ತುತ ಕೊಡಗಿನ ಕೃಷಿ ಭೂಮಿಗಳು ಭೂ ಪರಿವರ್ತನೆಯ ಮೂಲಕ ನಿವೇಶನಗಳಾಗಿ ಪರಿವರ್ತನೆಯಾಗುತ್ತಿದ್ದು, ಇದನ್ನು ನಿಯಂತ್ರಿಸಬೇಕಾದ ವ್ಯವಸ್ಥೆಯೇ ಹದಗೆಟ್ಟಿದೆ ಎಂದು ವಿಷಾದಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಖ್ಯಾತ ಅಂತರಾಷ್ಟ್ರೀಯ ಮಟ್ಟದ ಮಾಜಿ ಅಥ್ಲಿಟ್ ಅಶ್ವಿನಿ ನಾಚಪ್ಪ, ಚಲನಚಿತ್ರ ನಟರಾದ ರಕ್ಷಿತ್ ಶೆಟ್ಟಿ ಮತ್ತು ದಿಗಂತ್ ಮಾತನಾಡಿ ಕಾವೇರಿ ಕೂಗು ಅಭಿಯಾನಕ್ಕೆ ಬೆಂಬಲವನ್ನು ಸೂಚಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

11 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

12 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

12 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

12 hours ago