ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪಕ್ಷವು ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಚುನಾವಣಾ ಸ್ಪರ್ಧೆಗೆ ಆಕಾಂಕ್ಷಿಗಳು ಇರುವುದು ಸಹಜ. ಆದರೆ ಪಕ್ಷದ ತೀರ್ಮಾನ, ಶಿಸ್ತನ್ನು ಎಲ್ಲರೂ ಪಾಲಿಸಬೇಕು. ಬಂಡಾಯವಾಗಿ ನಾಮಪತ್ರ ಸಲ್ಲಿಸಿದವರ ಜೊತೆ ಪಕ್ಷದ ನಾಯಕರು ಮಾತುಕತೆ ನಡೆಸಿ ನಾಮಪತ್ರ ಹಿಂಪಡೆಯುವಂತೆ ಮನವಿ ಮಾಡಲಾಗಿತ್ತು. ಆದರೆ ಕೆಲವರು ನಾಮಪತ್ರ ಹಿಂಪಡೆಯದೆ ಸ್ಪರ್ಧಾ ಕಣದಲ್ಲಿ ಇದ್ದಾರೆ. ಅಂತವರ ವಿರುದ್ಧ ಬ್ಲಾಕ್ ಅಧ್ಯಕ್ಷರ ವರದಿಯ ಆಧಾರದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು. ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹಿರಿಯರನ್ನು ಮತ್ತು ಹೊಸ ಮುಖಗಳು ಸೇರಿ ಉತ್ತಮ ತಂಡವನ್ನು ಕಣಕ್ಕಿಳಿಸಲಾಗಿದೆ. ಈ ಬಾರಿ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ನಗರ ಪಂಚಾಯತ್ ಚುನಾವಣೆಗೆ ಹೋಲಿಸುವಂತಿಲ್ಲ. ಸ್ಥಳೀಯ ಸಮಸ್ಯೆಗಳೇ ಇಲ್ಲಿ ಚುನಾವಣಾ ವಿಷಯ. ಸುಳ್ಯದಲ್ಲಿ ಹಲವು ಸಮಸ್ಯೆಗಳಿದ್ದು ಅದರ ಪರಿಹಾರ ಮಾಡಲು ಮೂರು ಬಾರಿ ಆಡಳಿತ ನಡೆಸಿದ ಬಿಜೆಪಿ ವಿಫಲವಾಗಿದೆ ಎಂದು ದೂರಿದರು.
ಕೆಪಿಸಿಸಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ, ಮಡಿಕೇರಿ ನಗರ ಸಭೆ ಮಾಜಿ ಅಧ್ಯಕ್ಷ ನಂದಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಕೆ.ಎಂ.ಮುಸ್ತಫಾ, ಕೆ.ಗೋಕುಲ್ ದಾಸ್, ಧೀರಾ ಕ್ರಾಸ್ತಾ, ಚಂದ್ರಕುಮಾರ್, ಸುಜಯಾಕೃಷ್ಣ, ಶಶಿಧರ ಎಂ.ಜೆ, ಶ್ರೀಲತಾ ಪ್ರಸನ್ನ, ಎಸ್.ಎಂ.ಉಮ್ಮರ್, ಬಾಲಕೃಷ್ಣ ಭಟ್ ಕೊಡೆಂಕೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಸತೀಶ್ ಕೂಜುಗೋಡು, ಲಕ್ಷ್ಮಿ ಸುಬ್ರಹ್ಮಣ್ಯ, ರಫೀಕ್ ಪಡು, ಸುಧೀರ್ ರೈ ಮೇನಾಲ, ಎಸ್.ಸಂಶದುದ್ದಿನ್ ಮತ್ತಿತರರು ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…