ಮೈಸೂರು: ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡು ಜನರನ್ನು ಬಲಿ ಪಡೆದುಕೊಂಡಿದ್ದ ನರ ಭಕ್ಷಕ ಹುಲಿ ಕಾರ್ಯಾಚರಣೆಯ ಮೂಲಕ ಸೆರೆಯಾಗಿದೆ.
ಗುಂಡ್ಲು ಪೇಟೆ ಸಮೀಪದ ಮೇಲಕಾಮನಹಳ್ಳಿಯ ಸಿದ್ದಕ್ಕಿ ಎಂಬುವವರ ಜಮೀನಿನಲ್ಲಿ ಅಡಗಿ ಕುಳಿತಿದ್ದ ಹುಲಿಯನ್ನು ಪೋಲೀಸ್ ಇಲಾಖೆಯ ನಾಯಿ ರಾಣಾ ಪತ್ತೆ ಹಚ್ಚಿದೆ. ಕಳೆದ 5 ದಿನಗಳಿಂದಲೂ ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯಲು ಭಾರೀ ಕಾರ್ಯಾಚರಣೆ ನಡೆಸುತಿದ್ದು ಮೂರು ಆನೆಗಳ ಸಹಿತ ನೂರಾರು ಸಿಬ್ಬಂದಿಗಳು ಪ್ರಯತ್ನ ನಡೆಸಿದ್ದರು. ಆದರೆ 5 ದಿನಗಳಿಂದ ಯಾರ ಕಣ್ಣೀಗೂ ಬಿದ್ದಿಲ್ಲದ ಹುಲಿಯು ನಿನ್ನೆ ಕೂಡ ಕರುವೊಂದನ್ನು ಹೊತ್ತೊಯ್ದಿತ್ತು. ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಗೆ ಅರಿವಳಿಕೆ ನೀಡುವಲ್ಲಿ ಯಶಸ್ವಿಯಾಗಿದ್ದು ಅರವಳಿಕೆ ವೈದ್ಯ ಡಾ.ನಾಗರಾಜು, ಗುರಿಕಾರ ಅಸ್ಗರ್ ಮತ್ತು ಸಿಬ್ಬಂದಿಗಳಿಂದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?