ನರಿಮೊಗರು: ಇಲ್ಲಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಶ್ರೀಕೃಷ್ಣ ಲೀಲೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಕೃಷ್ಣ ರಾಧಾ ವೇಷಧಾರಿ ಪುಟಾಣಿಗಳ ಕಲರವ, ವಿದ್ಯಾರ್ಥಿಗಳು ,ಪೋಷಕರು ಮತ್ತು ಶಿಕ್ಷಕರಿಗೆ ಏರ್ಪಡಿಸಲಾದ ವಿವಿಧ ಕ್ರೀಡಾಕೂಟಗಳು, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕಾರ್ಯಕ್ರಮ ಮೆರುಗು ಪಡೆಯಿತು. ಸಭಾ ಕಾರ್ಯಕ್ರಮದ ಉದ್ಘಾಟನೆಯ ಬಳಿಕ ವಿದ್ಯಾರ್ಥಿಗಳಿಂದ ಶ್ರೀಕೃಷ್ಣನ ಮೂರ್ತಿಯೊಂದಿಗೆ ಮೆರವಣಿಗೆ, ಮೆರವಣಿಗೆಯಲ್ಲಿ ಹುಲಿ ವೇಷ, ಘೋಷ್ ತಂಡ, ಕೀಲು ಕುದುರೆ, ಬಣ್ಣದ ಕೊಡೆಗಳು, ವಿದ್ಯಾರ್ಥಿಗಳ ಭಜನೆ ಮೆರವಣಿಗೆಗೆ ಮೆರುಗು ನೀಡಿತು. ಅತಿಥಿಗಳು, ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಹೆತ್ತವರು, ಶಿಕ್ಷಕ ವೃಂದ, ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.
ಮೆರವಣಿಗೆಯ ಬಳಿಕ ವಿದ್ಯಾರ್ಥಿಗಳಿಂದ ಹುಲಿಕುಣಿತ, ಬಯಲು ರಂಗಮಂದಿರದಲ್ಲಿ ಶ್ರೀಕೃಷ್ಣ ನ ಸ್ತುತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿವಿಧ ಸ್ಪರ್ಧೆಗಳು ನಡೆಯಿತು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿದೆಡೆಗಳ ಅಂಗನವಾಡಿಗಳ ಪುಟಾಣಿ ಕೃಷ್ಣ ರಾಧಾ ವೇಷಧಾರಿಗಳು, ಸಂಸ್ಥೆಯ ಪುಟಾಣಿಗಳು ಪಾಲ್ಗೊಂಡಿದ್ದರು. ಎಲ್ಲಾ ವೇಷಧಾರಿಗಳಿಗೂ ಬಹುಮಾನ ಸ್ಮರಣಿಕೆ ನೀಡಿ ಗೌರವಿಸಿದರು.
ಸಭಾ ಕಾರ್ಯಕ್ರಮದ ಉದ್ಘಾಟನೆ
ಕಾರ್ಯಕ್ರಮದ ಅಂಗವಾಗಿ ಗೋಪಾಲಕೃಷ್ಣ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಉದ್ಘಾಟಿಸಿ ಮಾತನಾಡಿ, ಧರ್ಮ ಸಂಸ್ಥಾಪಕ ಶ್ರೀಕೃಷ್ಣನ ಜೀವನ ಎಂದಿಗೂ ಪ್ರಸ್ತುತ. ಪ್ರತೀ ವರ್ಷ ವಿಶಿಷ್ಟವಾಗಿ ಕೃಷ್ಣ ಲೀಲೋತ್ಸವ ಆಚರಿಸುತ್ತಿರುವ ಸಾಂದೀಪನಿ ವಿದ್ಯಾಸಂಸ್ಥೆಯು ಉತ್ತಮ ಹಾಗೂ ಧರ್ಮ ಬೋಧನೆಯ ಕಾರ್ಯ ಮಾಡುತ್ತಿದೆ ಎಂದರು.
ಭಕ್ತಕೋಡಿ ಎಸ್.ಜಿ.ಎಂ.ಪ್ರೌಢಶಾಲಾ ಮುಖ್ಯಗುರು ಶ್ರೀನಿವಾಸ ಎಚ್.ಬಿ ಮಾತನಾಡಿ, ಮಕ್ಕಳಿಗೆ ವಿನಯ, ವಿವೇಕ, ಸಂಸ್ಕಾರವನ್ನು ಕಲಿಸುವ ಕೆಲಸ ಸಾಂದೀಪನಿ ವಿದ್ಯಾ ಸಂಸ್ಥೆಗಳಿಂದ ಆಗುತ್ತಿದೆ. ವಿದ್ಯಾರ್ಥಿಗಳ ಪರಿಪೂರ್ಣ ಬೆಳವಣಿಗೆಗೆ ಸಾಂದೀಪನಿ ದಾರಿದೀಪವಾಗಿದೆ ಎಂದರು.
ಪ್ರಗತಿಪರ ಕೃಷಿಕ ರವಿಕುಮಾರ್ ದೊಡ್ಡಬಳ್ಳಾಪುರ, ಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆದ್ಕಾರು, ಶಾಲಾ ಸಂಚಾಲಕ ಭಾಸ್ಕರ ಆಚಾರ್ ಹಿಂದಾರ್ ಶುಭ ಹಾರೈಸಿದರು.
ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಶಿಬರ ಜಯರಾಮ ಕೆದಿಲಾಯ ಅಧ್ಯಕ್ಷತೆ ವಹಿಸಿದ್ದರು.
ಅಭಿನಂದನೆ
ವಿದ್ಯಾಭಾರತಿ ನಡೆಸಿದ ಜಿಲ್ಲಾ ಮಟ್ಟದ ಖೋ ಖೋ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ವಲಯ ಮಟ್ಟದ ಕಬಡ್ಡಿ, ಹಾಗೂ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ವಿಜೇತರಿಗೆ ಪದಕ ನೀಡಿ ಗೌರವಿಸಲಾಯಿತು. ಈ ದಿನ ಹುಟ್ಟು ಹಬ್ಬ ಆಚರಿಸಿದ ವಿದ್ಯಾರ್ಥಿ ಅನುದೀಪ್ ರೈ ಅವರಿಗೆ ಉಡುಗೊರೆ ಶುಭಾಶಯ ಸಲ್ಲಿಸಿದರು.
ನಾಗೇಶ್ ಕೆಡೆಂಜಿ, ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ, ದೈ.ಶಿ.ಶಿ. ಪ್ರಸಾದ್ ಅತಿಥಿಗಳನ್ನು ಗೌರವಿಸಿದರು.
ಮುಖ್ಯಶಿಕ್ಷಕಿ ಜಯಮಾಲಾ ವಿ.ಎನ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ಸುಕನ್ಯಾ ವಂದಿಸಿದರು. ಮಹಾಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.