ಪುತ್ತೂರು: ವಿದ್ಯಾರ್ಥಿಗಳಲ್ಲಿ ಕಂಡು ಬರುತ್ತಿರುವ ಗಿಡನೆಡುವ ಉತ್ಸಾಹವು ಹಿರಿಯರಾದ ನಮಗೆ ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಪ್ರೇರಣೆಯಾಗಿದೆ ಎಂದು ಗ್ರಾಮ ಪಂಚಾಯತ್ ಸದಸ್ಯರಾದ ರೇಖನಾಥ್ ಹೇಳಿದರು.
ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶಯದ ಗ್ರಾಮ ವಿಕಾಸ ಯೋಜನೆಯಲ್ಲಿ ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಇದರ ವತಿಯಿಂದ ನೈತಾಡಿ ಹಾಗೂ ಕುರಿಯ ಗ್ರಾಮದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಇದರ ವತಿಯಿಂದ ನೈತಾಡಿ ಹಾಗೂ ಕುರಿಯ ಗ್ರಾಮದ ಸುಮಾರು 50 ಮನೆಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ವೃಕ್ಷಾರೋಪಣ – 2019 ಎಂಬ ವಿಶಿಷ್ಟ ಕಲ್ಪನೆಯಲ್ಲಿ ಸಾಕಾರಗೊಂಡ ಈ ವನಮಹೋತ್ಸವ ಕಾರ್ಯಕ್ರಮವು ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿಯನ್ನಲ್ಲದೆ ಸಮಾಜ ದರ್ಶನದ ಅನುಭವವನ್ನೂ ನೀಡಿತು.
ಕಾರ್ಯಕ್ರಮದ ಯಶಸ್ಸಿಗೆ ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ತಾಲೂಕು ಪಂಚಾಯತ್ ಸದಸ್ಯರಾದ ಶಿವರಂಜನ್, ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರೂಪಲೇಖ, ಸಂಚಾಲಕರಾದ ವಿಜಯಕೃಷ್ಣ ಭಟ್ , ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ , ಗ್ರಾಮಸ್ಥರಾದ ಯಶವಂತ್, ಅಭಿಷೇಕ್, ಚಂದ್ರಪ್ರಕಾಶ್, ಚಂದ್ರಹಾಸ ರೈ ಡಿಂಬ್ರಿ, ಪುರಂದರ, ಸಂಯೋಜಕ ಉಪನ್ಯಾಸಕರಾದ ವಿಘ್ನೇಶ ವೈ , ಹಾಗೂ ಉಪನ್ಯಾಸಕರು , ವಿದ್ಯಾರ್ಥಿಗಳು ಸಹಕರಿಸಿದರು.
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…
21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳ್ಳಿಗದ್ದೆಯ ಶಾಂತಿ ಎಸ್ಟೇಟ್ನಲ್ಲಿ ಪುಂಡಾನೆ ಸೆರೆ ಹಿಡಿಯುವಲ್ಲಿ …
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490