ನಾಗರಪಂಚಮಿ ನಾಡಿಗೆ ದೊಡ್ಡ ಹಬ್ಬ….

August 5, 2019
11:21 AM

 

Advertisement
Advertisement

ನಾಗರಪಂಚಮಿ ನಾಡಿಗೆ ದೊಡ್ಡ ಹಬ್ಬ. ಭಾರತದ ಹಲವು ಭಾಗಗಳಲ್ಲಿ ಆಚರಿಸುವ ಈ ಹಬ್ಬ ಹಲವು ಹಬ್ಬಗಳಿಗೆ ನಾಂದಿ ಹಾಡುತ್ತದೆ.ಭಾವನಾತ್ಮಕ ಬೆಸುಗೆಗೂ ಈ ಹಬ್ಬ ಸಾಕ್ಷಿಯಾಗಿದೆ.
ಇದನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಪೂಜೆಯ ದಿನ ನಾಗದೇವತೆಗಳನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ ಎಲ್ಲಾ ಕೆಡುಕುಗಳಿಂದ ನಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ. ಅನಂತ, ವಾಸುಕಿ,ಶೇಷ,ಪದ್ಮ , ಕಂಬಬಾಲ, ಕಾರ್ಕೋಟಕ,ಅಶ್ವತಾರ, ದೃತರಾಷ್ಟ್ರ, ಶಂಖಪಾಲ, ಕಾಲಿಯಾ, ತಕ್ಷಕ, ಪಿಂಗಾಲ ಎಂಬ 12 ನಾಗದೇವತೆಗಳಿದ್ದು ಇವರನ್ನು‌ ನಾಗರ ಪಂಚಮಿಯಂದು ಪೂಜಿಸಲಾಗುತ್ತದೆ.

Advertisement

ಈ ಹಬ್ಬವು ಅಣ್ಣತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂಬ ಪ್ರತೀತಿ ಇದೆ.

ನಾಗರಪಂಚಮಿಯ ಹಿಂದಿನ ದಿನ ಸಹೋದರಿ ನಾಗದೇವತೆಗೆ ಬೇಡಿಕೊಂಡರೆ ಸಹೋದರನಿಗೆ ಲಾಭ ಹಾಗೂ ರಕ್ಷಣೆ ಸಿಗುತ್ತದೆ. ನಾಗರಪಂಚಮಿ ಮಾಂಗಲ್ಯಪ್ರದ ಹಾಗೂ ಸಂತಾನಪ್ರದ ಎಂಬ ನಂಬಿಕೆ. ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ವಿಶೇಷತೆಗಳಿಂದ ಕೂಡಿರುತ್ತದೆ. `ನಾಗರ ಪಂಚಮಿ ಬಂತು, ಅಣ್ಣ ಬರುತ್ತಾನೆ ಕರೆಯಾಕ, ಕರಿ ಸೀರೆ ಉಡಿಸಾಕ‘ ಎನ್ನುವ ಜಾನಪದ ಹಾಡು ಹಬ್ಬದ ವಿಶೇಷತೆ ಸಾರುತ್ತದೆ. ತವರಿಗೆ ಹೆಣ್ಣುಮಕ್ಕಳನ್ನು ಆಹ್ವಾನಿಸಿ, ಉಡುಗೊರೆ ನೀಡಿ ಗೌರವಿಸಲಾಗುತ್ತದೆ.

Advertisement

ನಾಗರಪಂಚಮಿಯ ಹಿನ್ನಲೆ:

ಒಂದಾನೊಂದು ಕಾಲದಲ್ಲಿ ಒಂದು ಊರಿನಲ್ಲಿ ಒಬ್ಬಳು ತಂಗಿ ಮತ್ತು ಅವಳಿಗೆ ನಾಲ್ಕು ಜನ ಅಣ್ಣಂದಿರು ಇದ್ದರು. ಮನೆಯವರೆಲ್ಲಾ ಸೇರಿ ಒಟ್ಟಿಗೆ ನಾಗರ ಪಂಚಮಿಯಂದು ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ನಾಗರಹಾವೊಂದು ರಭಸದಿಂದ ಬಂದು ನಾಲ್ಕು ಜನ ಅಣ್ಣಂದಿರನ್ನು ಬಲಿ ತೆಗೆದುಕೊಂಡಿತು. ನಂತರ ಆ ತಂಗಿಯು ಅಣ್ಣಂದಿರನ್ನು ಕಳೆದುಕೊಂಡ ನೋವನ್ನು ತಡೆಯಲಾರದೆ ಆ ನಾಗರಹಾವಿಗೆ ಹೇಳಿದಳು, ನನ್ನ ನಾಲ್ಕು ಜನ ಅಣ್ಣಂದಿರಲ್ಲಿ ಒಬ್ಬರನ್ನಾದರೂ ಬದುಕಿಸಿಕೊಡು, ನಾನು ಯಾರನ್ನು ಅಣ್ಣ ಎಂದು ಕರೆಯಲಿ ಎಂದು ಕಣ್ಣೀರಿಟ್ಟಳು. ತದ ನಂತರ ಆ ನಾಗರ ಹಾವು ಆಕೆಯ ಮಾತಿಗೆ ಕಿವಿಗೊಟ್ಟು ಅಣ್ಣಂದಿರ ಬಳಿ ಬಂದು ಒಬ್ಬ ಅಣ್ಣನನ್ನು ಪ್ರಾಣಾಪಾಯದಿಂದ ಕಾಪಾಡಿತು.

Advertisement

ನಂತರ ಅಣ್ಣ – ತಂಗಿ ಇಬ್ಬರು ಸೇರಿ ನಾಗರಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು ಇದನ್ನೇ ಇನ್ನೊಂದು ರೀತಿಯಲ್ಲೂ ಹೇಳಲಾಗುತ್ತದೆ.

ಅದೇನೆಂದರೆ ಹಿಂದೆ ದೇವಶರ್ಮ ಎಂಬ ಬ್ರಾಹ್ಮಣನೊಬ್ಬನಿದ್ದನು. ಆತನಿಗೆ 8 ಗಂಡು ಮಕ್ಕಳು ಹಾಗೂ ಒಬ್ಬಾಕೆ ಹೆಣ್ಣು ಮಗಳಿದ್ದಳು. ಒಂದು ದಿನ ಗರುಡನಿಂದ ಹೆದರಿಸಲ್ಪಟ್ಟ ನಾಗರವೊಂದು ಈ ಕನ್ನಿಕೆಯ ಬಳಿ ಬಂದು ಆಶ್ರಯವನ್ನು ಕೇಳುತ್ತದೆ. ಭಕ್ತಿಯಿಂದ ಕನ್ನಿಕೆ ಆ ನಾಗನಿಗೆ ಹಾಲು, ಫಲಗಳನ್ನು ಇಟ್ಟು ಭಕ್ತಿಯಿಂದ ಸಾಕುತ್ತಾಳೆ. ಇದಕ್ಕೆ ಪ್ರತಿಯಾಗಿ ಆ ನಾಗವು ದಿನಂಪ್ರತಿ ಆಕೆಗೆ ಒಂದು ತೊಲೆ ಚಿನ್ನವನ್ನು ನೀಡುತ್ತಿರುತ್ತದೆ. ಹೀಗಿರಲು ಒಂದು ದಿನ ಎಂಟು ಗಂಡು ಮಕ್ಕಳಲ್ಲಿ ಒಬ್ಬನು ತುಂಬಾ ಬಂಗಾರ ಬೇಕೆಂದು ನಾಗನನ್ನು ಪೀಡಿಸಿ, ಕಾಲಿನಿಂದ ಒದೆಯುತ್ತಾನೆ. ಕೋಪಗೊಂಡ ನಾಗರ ಹಾವು ಅವನ್ನು ಸೇರಿದಂತೆ ಇತರ ಏಳು ಜನರನ್ನು ಕೊಂದು ಹೊರಟು ಹೋಗುತ್ತದೆ. ತನ್ನ ಅಣ್ಣಂದಿರ ಸಾವಿಗೆ ತಾನೇ ಕಾರಣನಾದೇ ಎಂದು ಆ ಕನ್ನಿಕೆ, ದೇವರ ಇದಿರಿನಲ್ಲಿ ಶಿರಚ್ಛೇದನಕ್ಕೆ ಮುಂದಾದಾಗ, ನಾರಾಯಣನು ವಾಸುಕಿಗೆ ಆ ಸತ್ತ ಹುಡುಗರನ್ನು ಬದುಕಿಸಲು ಹೇಳುತ್ತಾನೆ. ಈ ರೀತಿ ಪುನಃ ಅಣ್ಣಂದಿರ ಜೀವವನ್ನು ಮರಳಿ ಪಡೆದುಕೊಳ್ಳುವಲ್ಲಿ ಆ ಕನ್ನಿಕೆ ಯಶಸ್ವಿಯಾದ ದಿನವೇ ನಾಗರ ಪಂಚಮಿ.

Advertisement

ಪುರಾಣ : ಜನಮೇಜಯ ರಾಜ ತನ್ನ ತಂದೆ ಪರೀಕ್ಷಿತ ರಾಜನ ಸಾವಿಗೆ ಸರ್ಪವೊಂದು ಕಾರಣವೆಂದು ತಿಳಿದು, ಭೂಲೋಕದಲ್ಲಿ ಸರ್ಪಸಂಕುಲವನ್ನು ನಿರ್ನಾಮ ಮಾಡಲು ‘ಸರ್ಪಯಜ್ಞ’ವನ್ನು ಆರಂಭಿಸುತ್ತಾನೆ. ಆ ಸಂದರ್ಭದಲ್ಲಿ ಸರ್ಪಗಳ ದೂರದ ಬಂಧುವಾದ ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನನ್ನು ಪ್ರಸನ್ನಗೊಳಿಸಿಕೊಂಡನು. ಜನಮೇಜಯ ರಾಜನು ‘ವರವನ್ನು ಕೇಳು’ ಎಂದು ಹೇಳಿದಾಗ, ಆಸ್ತಿಕನು ಪ್ರಾಣಿಹಿಂಸೆ ಮಹಾಪಾಪ, ನೀನು ಈಗಾಗಲೇ ಮಾಡುತ್ತಿರುವ ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂಬ ವರವನ್ನು ಕೇಳಿಕೊಂಡನು. ಜನಮೇಜಯನು ಆಸ್ತಿಕನ ಮಾತಿಗೆ ಬೆಲೆಕೊಟ್ಟು ಸರ್ಪಯಜ್ಞವನ್ನು ನಿಲ್ಲಿಸಿದ ದಿನ ಪಂಚಮಿಯಾಗಿತ್ತು.

ಕೃಷ್ಣ ನ ನೆನಪು: ನಾಗರ ಪಂಚಮಿಗೂ ಭಗವಾನ್ ಶ್ರೀಕೃಷ್ಣನಿಗೂ ಸಂಬಂಧವಿದೆ. ಪುರಾಣ ಕತೆಯೊಂದರ ಪ್ರಕಾರ ಬಾಲ ಕೃಷ್ಣ ಯಮುನಾ ನದಿ ತೀರದಲ್ಲಿ ಆಟವಾಡುತ್ತಿದ್ದಾಗ ನದಿಯಲ್ಲಿ ಜಾರಿ ಬೀಳುತ್ತಾನೆ. ಕೃಷ್ಣ ನದಿಗೆ ಬಿದ್ದ ಸಂದರ್ಭದಲ್ಲಿ ಕಾಳಿಯಾ ಎಂಬ ಹಾವೊಂದು ಆತನ ಮೇಲೆ ದಾಳಿ ನಡೆಸುತ್ತದೆ. ಆದರೆ ದೈವತ್ವದ ಸ್ವರೂಪವಾಗಿದ್ದ ಶ್ರೀಕೃಷ್ಣ ಕಾಳಿಯಾನನ್ನು ಮಣಿಸುತ್ತಾನೆ. ಈತ ಸಾಮಾನ್ಯ ಮಗುವಲ್ಲ ಎಂಬುದನ್ನು ಅರಿತ ಕಾಳಿಯ ಹಾವು ತನ್ನನ್ನು ಬಿಟ್ಟುಬಿಡುವಂತೆ ಕೃಷ್ಣನಲ್ಲಿ ಬೇಡುತ್ತದೆ. ಆಗ ಜನರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ವಚನ ಪಡೆದು, ಶ್ರೀಕೃಷ್ಣ ಆ ಹಾವನ್ನು ಬಿಟ್ಟು ಬಿಡುತ್ತಾನೆ. ಹೀಗೆ ಕೃಷ್ಣನು ಕಾಳಿಯಾ ಹಾವನ್ನು ಸೋಲಿಸಿದ ದಿನ ಶ್ರಾವಣ ಶುಕ್ಲ ಪಂಚಮಿಯಾಗಿತ್ತು. ಭಯಂಕರ ಹಾವನ್ನು ಕೃಷ್ಣ ಮಣಿಸಿದ ನೆನಪಿಗಾಗಿ ಈ ಹಬ್ಬ ಆಚರಿಸಲಾಗುತ್ತದೆ ಎಂಬ ನಂಬಿಕೆಯೂ ಇದೆ.

Advertisement

ಮಳೆಗಾಲದಲ್ಲಿ ಹಾವಿನ ಭಯ: ನಾಗರ ಪಂಚಮಿಯನ್ನು ಮಳೆಗಾಲದ ಸಮಯದಲ್ಲೇ ಆಚರಿಸುವುದಕ್ಕೆ ಕಾರಣ ಹುಡುಕಿದರೆ, ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಹಾವುಗಳಿಂದ ರಕ್ಷಣೆ ಪಡೆಯುವ ಉದ್ದೇಶ ಎದ್ದು ಕಾಣುತ್ತದೆ. ಈ ಸಮಯದಲ್ಲಿ ಹಾವಿಗೆ ಹಾಲೆರೆಯುವ ಮೂಲಕ ಯಾವುದೇ ರೀತಿಯ ಅಪಾಯ ನೀಡದಿರು ಎಂದು ಬೇಡುವ ಉದ್ದೇಶವೂ ಇರುವುದು ಸುಳ್ಳಲ್ಲ

ಉಪವಾಸದ ಮಹತ್ವ: ನಾಗರಪಂಚಮಿಯಂದು ಮಾಡಿದ ಉಪವಾಸದ ಮಹತ್ವವೆಂದರೆ ೫ ಯುಗಗಳ ಹಿಂದೆ ಸತ್ಯೇಶ್ವರೀ ಎಂಬ ಹೆಸರಿನ ದೇವಿಯಿದ್ದಳು. ಸತ್ಯೇಶ್ವರನು ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರಪಂಚಮಿಯ ಹಿಂದಿನ ದಿನ ಮೃತ್ಯು ಹೊಂದಿದನು. ಆಗ ಸಹೋದರನ ಮೃತ್ಯುವಿನ ಶೋಕದಲ್ಲಿ ಸತ್ಯೇಶ್ವರಿಯು ಆಹಾರವನ್ನು ಸ್ವೀಕರಿಸಲಿಲ್ಲ. ಆದುದರಿಂದ ಆ ದಿನ ಸ್ತ್ರೀಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. ‘ಸಹೋದರನಿಗೆ ಅಖಂಡ ಆಯುಷ್ಯವು ದೊರಕಲಿ, ಅನೇಕ ಆಯುಧಗಳು ಪ್ರಾಪ್ತವಾಗಲಿ ಮತ್ತು ಅವನು ಪ್ರತಿಯೊಂದು ದುಃಖ ಮತ್ತು ಸಂಕಟ ಗಳಿಂದ ಪಾರಾಗಲಿ’ ಎನ್ನುವುದು ಸಹ ಈ ಉಪವಾಸದ ಹಿಂದಿನ ಕಾರಣವಾಗಿದೆ.

Advertisement

ನಾಗರಪಂಚಮಿಯ ಹಿಂದಿನ ದಿನ ಪ್ರತಿಯೊಬ್ಬ ಸಹೋದರಿಯು ದೇವರಲ್ಲಿ ಮೊರೆ ಇಡುವುದರಿಂದ ಅವಳ ಸಹೋದರನಿಗೆ ಲಾಭವಾಗುತ್ತದೆ ಮತ್ತು ಅವನ ರಕ್ಷಣೆಯಾಗುತ್ತದೆ. ಸತ್ಯೇಶ್ವರಿಗೆ ಅವಳ ಸಹೋದರನು ನಾಗರೂಪದಲ್ಲಿ ಕಂಡನು. ಆಗ ಅವಳು ಆ ನಾಗರೂಪವನ್ನು ತನ್ನ ಸಹೋದರನೆಂದು ಭಾವಿಸಿದಳು. ಆಗ ನಾಗದೇವನು, ನನ್ನನ್ನು ಸಹೋದರನೆಂದು ಭಾವಿಸಿ ಪೂಜೆ ಮಾಡಿದ ಸಹೋದರಿಯ ರಕ್ಷಣೆಯನ್ನು ನಾನು ಮಾಡುವೆನು ಎಂದು ಅವಳಿಗೆ ವಚನ ನೀಡಿದನು. ಆದುದರಿಂದಲೇ ಆ ದಿನ ಪ್ರತಿಯೊಬ್ಬ ಸ್ತ್ರೀಯು ನಾಗನ ಪೂಜೆ ಮಾಡಿ ನಾಗರಪಂಚಮಿಯನ್ನು ಆಚರಿಸುತ್ತಾಳೆ.

ಆಚರಣೆ ಯ ವಿಧಾನ: ಹಬ್ಬದ ದಿನ ಜನರು ಉಳುಮೆ ಸಹಿತ ಯಾವುದೇ ನೆಲವನ್ನು‌ಅಗೆಯುವ ಕಾರ್ಯವನ್ನು ಮಾಡುವುದಿಲ್ಲ. ನಾಗರಕಲ್ಲಿಗೆ ಹಸುವಿನ ಹಾಲು ,ಅರಳು ಬತ್ತದ ತೆನೆ , ಮತ್ತು ದೂರ್ವ ಅಥವಾ ಗರಿಕೆಯನ್ನು ಅರ್ಪಿಸಿ ನಾಗನನ್ನು ಪೂಜಿಸಲಾಗುತ್ತದೆ.

Advertisement

 

ಎಲ್ಲರಿಗೂ ನಾಗರಪಂಚಮಿಯ ಹಾರ್ಧಿಕ ಶುಭಾಶಯಗಳು

Advertisement

ಬರಹ:  ಅಪೂರ್ವ ಕೊಲ್ಯ

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |
May 2, 2024
6:51 AM
by: ವಿವೇಕಾನಂದ ಎಚ್‌ ಕೆ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ | ಸಾಧ್ಯವಾದರೆ ಇದನ್ನು ಮಕ್ಕಳಿಗೆ ಓದಿ ಹೇಳಿ ಅಥವಾ ಓದಲು ಹೇಳಿ |
May 1, 2024
4:34 PM
by: ವಿವೇಕಾನಂದ ಎಚ್‌ ಕೆ

You cannot copy content of this page - Copyright -The Rural Mirror