ನಾಡಹಬ್ಬ ಮೈಸೂರು ದಸರಾಕ್ಕೆ ಹಿರಿಯ ಸಾಹಿತಿ ಡಾ. ಎಸ್. ಎಲ್. ಭೈರಪ್ಪ ಚಾಲನೆ

September 29, 2019
5:44 PM

ಮೈಸೂರು/ಸುಳ್ಯ:  ನಾಡಹಬ್ಬ ಮೈಸೂರು ದಸರಾಕ್ಕೆ  ಹಿರಿಯ ಸಾಹಿತಿ ಡಾ. ಎಸ್. ಎಲ್. ಭೈರಪ್ಪ ಅವರು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದ ಗೌಡ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಷಿ, ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ,ಲೋಕಸಭಾ ಸದಸ್ಯ ಪ್ರತಾಪ ಸಿಂಹ, ಶಾಸಕರಾದ ಎಸ್. ಎ.ರಾಮದಾಸ್, ಜಿ.ಟಿ. ದೇವೇಗೌಡ, ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಪುಷ್ಪಲತಾ ಜಗನ್ನಾಥ್ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು  ಮೈಸೂರಿನಲ್ಲಿ ರಾಣಿ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ದಸರಾ ಹಬ್ಬದ ಶುಭಾಶಯ ಕೋರಿ ಮಾತುಕತೆ ನಡೆಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ
August 3, 2026
5:45 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror