ಮೈಸೂರು/ಸುಳ್ಯ: ನಾಡಹಬ್ಬ ಮೈಸೂರು ದಸರಾಕ್ಕೆ ಹಿರಿಯ ಸಾಹಿತಿ ಡಾ. ಎಸ್. ಎಲ್. ಭೈರಪ್ಪ ಅವರು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದ ಗೌಡ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಷಿ, ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ,ಲೋಕಸಭಾ ಸದಸ್ಯ ಪ್ರತಾಪ ಸಿಂಹ, ಶಾಸಕರಾದ ಎಸ್. ಎ.ರಾಮದಾಸ್, ಜಿ.ಟಿ. ದೇವೇಗೌಡ, ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಪುಷ್ಪಲತಾ ಜಗನ್ನಾಥ್ ಮೊದಲಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೈಸೂರಿನಲ್ಲಿ ರಾಣಿ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ದಸರಾ ಹಬ್ಬದ ಶುಭಾಶಯ ಕೋರಿ ಮಾತುಕತೆ ನಡೆಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…