ನಾಡಿನೆಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ತುಳುನಾಡಿನಲ್ಲಿ ನಾಗಾರಾಧನೆ ವಿಶೇಷವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ನಾಗನಿಗೆ ವಿಶೇಷ ಪೂಜೆ ನಡೆಯಿತು. ಮನೆ ಮನೆಗಳಲ್ಲಿ ನಾಗ ಬನಗಳಲ್ಲಿ ವಿಶೇಷ ಪೂಜೆ, ತಂಬಿಲ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿಯಂದು ವಿಶೇಷ ಪೂಜೆಯ ಜೊತೆಗೆ ದೇವಸ್ಥಾನದಲ್ಲಿ ಈ ಬಾರಿ ನಾಗರಹಾವು ಕಂಡುಬಂದದ್ದು ಭಕ್ತ ಸಮೂಹಕ್ಕೆ ವಿಶೇಷ ಎನಿಸಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ
ನಾಗರಪಂಚಮಿಯಂದು ತುಳುನಾಡಿನ ಎಲ್ಲಾ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ವಿಶೇಷವಾದ ಪೂಜೆ ನಡೆಯುತ್ತದೆ. ಈ ಬಾರಿ ಕೊರೋನಾ ಕಾರಣದಿಂದ ಆಚರಣೆ , ಸಂಪ್ರದಾಯಕ್ಕೆ ಧಕ್ಕೆ ಬಾರದಂತೆ ಎಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ಪ್ರತೀ ಬಾರಿಯಂತೆ ಈ ಬಾರಿಯೂ ಮನೆ ಮನೆಗಳಲ್ಲಿರುವ ನಾಗ ಬನಗಳಲ್ಲಿ ವಿಶೇಷ ಆರಾಧನೆ ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಂಡುಬಂದ ನಾಗರಹಾವು – ವೀಡಿಯೋ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿಯಂದು ನಾಗರಹಾವು ಕಂಡುಬಂದದ್ದು ವಿಶೇಷ ಎನಿಸಿತು. ಕುಕ್ಕೆ ಸುಬ್ರಹ್ಮಣ್ಯ ಎಂದರೆ ನಾಗನ ಊರು. ಇಲ್ಲಿನ ಪರಿಸರದಲ್ಲಿ ಹಿಂದಿನಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ನಾಗರಹಾವುಗಳು ಕಂಡುಬರುತ್ತಿತ್ತು. ಅಭಿವೃದ್ಧಿಯ ಹೆಸರಿನಲ್ಲಿ ಕಾಂಕ್ರೀಟ್ ಕಾಡುಗಳಾದ ಬಳಿಕ ಅಪರೂಪ ಎನಿಸಿದೆ, ಈಗ ವಿಶೇಷ ಎನಿಸಿದೆ.
ನಾಗಬನಗಳಲ್ಲಿ :
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…