ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದ್ದ ವಿಷಯಕ್ಕೆ ತೆರೆ ಬಿದ್ದಿದೆ. ಕೆಲವು ದಿನಗಳ ಹಿಂದೆಯಷ್ಟೇ ಸಿಎಎ ವಿಚಾರದಲ್ಲಿ ದೇಶದಾದ್ಯಂತ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಹಭಾಸ್ ಗಿಟ್ಟಿಸಿಕೊಂಡಿದ್ದರು. ಆದರೆ ಈಗ ಕೊರೊನಾ ವಿಷಯದಲ್ಲಿ ನರೇಂದ್ರ ಮೋದಿ ಅವರೇ ಮುಂದೆ ಬಂದಿದ್ದಾರೆ ಮಾತ್ರವಲ್ಲ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೀಡ್ ಮಾಡುತ್ತಾರೆ. ಇದೇಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಲ್ಲೂ ಕಾಣಿಸುತ್ತಿಲ್ಲ ಎಂಬ ಚರ್ಚೆ ಆರಂಭವಾಗಿತ್ತು. ಈ ಸಂದರ್ಭ ಆರೋಗ್ಯದ ಸಮಸ್ಯೆ ಎಂದು ಒಂದು ಕಡೆ ವಾದ ಇದ್ದರೆ ಇನ್ನೊಂದು ಕಡೆ ಅಮಿತ್ ಶಾ ಅವರನ್ನು ಬದಿಗೆ ಸರಿಸಲಾಗುತ್ತಿದೆ, ಅವರ ಅಭಿಪ್ರಾಯ ಪಡೆಯಲಾಗುತ್ತಿಲ್ಲ ಎಂಬ ಬಗ್ಗೆಯೂ ಚರ್ಚೆಯಾಗುತ್ತಿತ್ತು.
ಇದೀಗ ಈ ಎಲ್ಲಾ ಚರ್ಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಟ್ವಿಟ್ಟರ್ ಮೂಲಕವೇ ಉತ್ತರ ನೀಡಿದ್ದಾರೆ, ಮಾತ್ರವಲ್ಲ ಮಾಧ್ಯಮಗಳ ಮೂಲಕ ಇಲಾಖೆಗಳಿಗೆ ಸಂಬಂಧಿಸಿದ ಹೇಳಿಕೆಗಳನ್ನೂ ನೀಡಿದ್ದಾರೆ.
ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾನು ಆರೋಗ್ಯವಾಗಿದ್ದೇನೆ. ನನಗೆ ಏನೂ ಆಗಿಲ್ಲ. ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ, ಪ್ರಸ್ತುತ ದೇಶ ಮಾರಣಾಂತಿಕ ಕೊರೊನಾ ವೈರಸ್ ವಿರುದ್ದ ಹೋರಾಟ ನಡೆಸುತ್ತಿದೆ. ಗೃಹ ಸಚಿವನಾಗಿ ನಾನು ಮಾಡಬೇಕಾದ ಕಾರ್ಯಗಳನ್ನು ನಿರ್ವಹಿಸುತ್ತಿದ್ದೇನೆ. ಈ ಅಪಪ್ರಚಾರದ ಬಗ್ಗೆ ನನ್ನ ಗಮನಕ್ಕೆ ಬಂದರೂ ಸಹ ನಾನು ತಲೆಕೆಡಿಸಿಕೊಳ್ಳದ ಕಾರಣದಿಂದ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ ಎಂದು ತಿಳಿಸಿದ್ದಾರೆ. ಈಗ ಬಿಜೆಪಿಯ ಲಕ್ಷಾಂತರ ಕಾರ್ಯಕರ್ತರು ಹಾಗೂ ನನ್ನ ಹಿತೈಷಿಗಳು ಕಳೆದ ಎರಡು ದಿನಗಳಿಂದ ನನ್ನ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಹಾಗಾಗಿ ಈ ವಿಚಾರವಾಗಿ ನಾನೇ ಸ್ಪಷ್ಟನೆ ನೀಡುತ್ತಿದ್ದೇನೆ. ನನಗೆ ಯಾವುದೇ ಕಾಯಿಲೆ ಇಲ್ಲ. ನಾನು ಆರೋಗ್ಯವಾಗಿದ್ದೇನೆ ಎಂದಿದ್ದಾರೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…