ಉಜಿರೆ: ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಸೋಮವಾರ ಎರಡನೆ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ನಡೆಯಲಿದೆ ಎಂದು ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ತಿಳಿಸಿದ್ದಾರೆ. ಅವರು ಶನಿವಾರ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅಖಿಲ ಭಾರತ ಪ್ರಕೃತಿ ಚಿಕಿತ್ಸಾ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷರಾಗಿ ರಾಷ್ಟ್ರಪಿತ ಮಹಾತ್ಮಾಗಾಂಧೀಜಿ 1945 ರ ನ. 18 ರಂದು ದಾಖಲೆಗೆ ಸಹಿ ಹಾಕಿರುವುದರಿಂದ ಕೇಂದ್ರ ಸರ್ಕಾರ ಮತ್ತು ಆಯುಷ್ ಇಲಾಖೆಯ ನಿರ್ದೇಶನದಂತೆ ನ.18 ರಂದು ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನವಾಗಿ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಕಳೆದ ಎರಡು ವರ್ಷಗಳಿಂದ ದೇಶದೆಲ್ಲೆಡೆ ಪ್ರಕೃತಿ ಚಿಕಿತ್ಸಾ ದಿನಾಚರಣೆ ನಡೆಸಲಾಗುತ್ತದೆ.
1200 ಪ್ರತಿನಿಧಿಗಳು ಹಾಗೂ ರಾಜ್ಯದ ಎಂಟು ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸುವರು. ಸೋಮವಾರ ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಮಧುಮೇಹ ಮತ್ತು ಪ್ರಕೃತಿ ಚಿಕಿತ್ಸೆ ಬಗ್ಗೆ ಕಾರ್ಯಾಗಾರ ನಡೆಯುತ್ತದೆ. ಬೆಳ್ತಂಗಡಿ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಆರು ತಿಂಗಳುಗಳಿಂದ ಉಚಿತ ಆರೋಗ್ಯ ಶಿಬಿರ ನಡೆಸಿ ರಕ್ತದೊತ್ತಡ, ಬೊಜ್ಜು, ಮಧುಮೇಹದ ಬಗ್ಗೆ ಅರಿವು, ಜಾಗೃತಿ ಮೂಡಿಸಲಾಗಿದೆ. ಧರ್ಮಸ್ಥಳದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಈಗಾಗಲೆ ಮೂರು ಕೋಟಿ ರೂ.ವೆಚ್ಚದಲ್ಲಿ ಪ್ರಯೋಗಾಲಯ ಪ್ರಾರಂಭಿಸಿದ್ದು, ಸಂಶೋಧನೆಗೆ ಒತ್ತು ನೀಡಲಾಗುವುದು ಎಂದು ಅವರು ತಿಳಿಸಿದರು.
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ರಾಷ್ಟ್ರೀಯ ಪ್ರಕೃತಿ ದಿನಾಚರಣೆ ಉದ್ಘಾಟಿಸುವರು. ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಶುಭಾಶಂಸನೆ ಮಾಡುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಕಾಲೇಜಿನ ಡೀನ್ ಡಾ.ಗೀತಾ ಶೆಟ್ಟಿ ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…