ಸುಳ್ಯ: ಬಿ ಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಶಾಸಕ ಅಂಗಾರ ಅವರು ನಾಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ.
ಕಳೆದ ಹಲವಾರು ದಿನಗಳಿಂದ ಈ ಬಗ್ಗೆ ಚರ್ಚೆ ನಡೆಯುತ್ತಿತ್ತು. ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆ ಎಂಬುದು ನಿರೀಕ್ಷೆಯಾಗಿತ್ತು. ಸಂಪುಟದಲ್ಲಿ ಸ್ಥಾನ ಪಡೆಯುವ ಶಾಸಕರುಗಳ ಅಧಿಕೃತವಾದ ಪಟ್ಟಿ ಇದುವರೆಗೂ ಬಿಡುಗಡೆಯಾಗಿಲ್ಲ.ನಾಳೆ ಬೆಳಗ್ಗೆ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈಗಾಗಲೇ ಶಾಸಕ ಅಂಗಾರ ಅವರು ಬೆಂಗಳೂರಿಗೆ ತೆರಳಿದ್ದು ಸಚಿವ ಸ್ಥಾನದ ಬಗ್ಗೆ ಸುಳ್ಯನ್ಯೂಸ್.ಕಾಂ ಜೊತೆ ವಿಶ್ವಾಸದ ಮಾತುಗಳನ್ನಾಡಿದ್ದಾರೆ.ಇದುವರೆಗೆ ಯಾವುದೇ ಅಧಿಕೃತವಾದ ಮಾಹಿತಿ ಬಂದಿಲ್ಲ ಎಂದೂ ತಿಳಿಸಿದ್ದಾರೆ. ಹಿರಿಯ ಶಾಸಕ ಅಂಗಾರ ಅವರ ಹೆಸರು ಸಚಿವ ಸ್ಥಾನಕ್ಕೆ ಈಗಾಗಲೇ ಅಂತಿಮವಾಗಿದೆ ಎಂದು ಮೂಲಗಳು ಸುಳ್ಯನ್ಯೂಸ್.ಕಾಂ ಗೆ ತಿಳಿಸಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel