ನಿಂತಿಕಲ್ಲು: ಯೋಗ ದಿನಾಚರಣೆ ಅಂಗವಾಗಿ ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಯೋಗ ದಿನಾಚರಣೆ ಯನ್ನು ಆಚರಿಸಲಾಯಿತು . ಸಭಾದ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದ್ಯಕ್ಷರಾದ ಅಶೋಕ್ ಕುಮಾರ್ ಕೆ ಯಸ್ ವಹಿಸಿದ್ದರು.
ಸಂಸ್ಥೆಯ ಹಿರಿಯ ವಿದ್ಯಾರ್ಥಿ ಯೋಗಿಕ್ ಪದವೀಧರೆ ಅಪರ್ಣಾ ಕೆ.ಕೆ. ಕಾರ್ಯಕ್ರಮ ಉದ್ಘಾಟಿಸಿ, ಯೋಗದ ವಿಧಾನಗಳು ಮತ್ತು ಉಪಯೋಗಗಳ ಕುರಿತು ಮಾತನಾಡಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಪ್ರಾಸ್ತಾವಿಕ ಮಾತು ಗಳೊಂದಿಗೆ ಸ್ವಾಗತಿಸಿದರು. ಪ್ರಾಥಮಿಕ ಮತ್ತು ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಉಮೇಶ್ ಗೌಡ ಹೆಚ್. ಶುಭ ಹಾರೈಸಿದರು.
ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಗುರು ಪ್ರಸಾದ್ ಟಿ. ಧನ್ಯವಾದಗೈದರು.ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಪ್ರಸನ್ನ ವೈ ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಿಥನ್ ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಆಸನಗಳೊಂದಿಗೆ ನಿಯಮಗಳನ್ನು ವಿವರಿಸಿದರು. ಶಿಕ್ಷಕ ಅಜಿತ್ ಗೌಡ ಐವರ್ನಾಡು ಕಾರ್ಯಕ್ರಮ ನಿರೂಪಿಸಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…