ಸುಳ್ಯ: ಸುಳ್ಯ ನಗರ ವ್ಯಾಪ್ತಿಯಲ್ಲಿ ಕಳೆದ 15 ವರ್ಷಗಳಿಂದ ಮನೆ ನಿವೇಶನಕ್ಕಾಗಿ 365 ಮಂದಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಸುಳ್ಯದಲ್ಲಿ ಸರಕಾರಿ ಭೂಮಿ ಲಭ್ಯವಿದ್ದರೂ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿ ಭೂಮಿ ಪಡೆದು ನಿವೇಶನ ರಹಿತರಿಗೆ ನೀಡಲು ನಗರ ಪಂಚಾಯತ್ ಕ್ರಮ ಕೈಗೊಂಡಿಲ್ಲ ಎಂದು ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಬುಧವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ ಉಮ್ಮರ್ ದೂರು ದಾಖಲಿಸಿದ್ದಾರೆ. ಸುಳ್ಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಡಿವೈಎಸ್‍ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ದೂರು ಸ್ವೀಕರಿಸಿದರು. ಸುಳ್ಯ ನಗರದಲ್ಲಿ ಪಂಚಾಯತ್ ಅನುಮತಿ ಪಡೆಯದೆ ವಾಣಿಜ್ಯ ಸಂಕೀರ್ಣ ನಿರ್ಮಾಣ ನಡೆಯುತ್ತಿದ್ದರೂ ನಗರ ಪಂಚಾಯತ್ ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಉಮ್ಮರ್ ಮತ್ತೊಂದು ದೂರು ದಾಖಲಿಸಿದರು. ದೇವಚಳ್ಳ ಸರಕಾರಿ ಶಾಲೆಯ ಆಟದ ಮೈದಾನದ ಬಳಿಯ ಮರವನ್ನು ನಿಯಮ ಬಾಹಿರವಾಗಿ ಕಡಿಯಲಾಗಿದೆ. ಇಲ್ಲಿ ಆಟದ ಮೈದಾನದ ಕಾಮಗಾರಿಯನ್ನು ನರೇಗಾ ಯೋಜನೆಯಡಿಯಲ್ಲಿ ಮಾಡಲಾಗಿದ್ದು ಕಾನೂನು ಮಾರ್ಗಸೂಚಿಯಂತೆ ಕಾಮಗಾರಿ ಮಾಡದೆ ಬಿಲ್ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟು ತೃಪ್ತಿದಾಯಕ ಕ್ರಮ ಕೈಗೊಂಡಿಲ್ಲ. ಈ ಕುರಿತು ತನಿಖೆ ನಡೆಸಬೇಕು ಎಂದು ಹರಿಪ್ರಸಾದ್ ಚಳ್ಳ ಪ್ರತ್ಯೇಕ ಎರಡು ದೂರು ದಾಖಲಿಸಿದರು.
ವಿವಿಧ ವಿಷಯಕ್ಕೆ ಸಂಬಂಧಪಟ್ಟು ಒಟ್ಟು ಏಳು ದೂರು ನೀಡಲಾಗಿದ್ದು ಆರು ದೂರು ದಾಖಲಿಸಲಾಗಿದೆ ಎಂದು ಡಿವೈಎಸ್‍ಪಿ ವಿಜಯಪ್ರಸಾದ್ ತಿಳಿಸಿದ್ದಾರೆ. ಕೆಲವೊಂದು ದೂರುಗಳ ಬಗ್ಗೆ ಸ್ಥಳದಲ್ಲಿಯೇ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚಿಸಲಾಯಿತು. ಲೋಕಾಯುಕ್ತ ಸಿಬ್ಬಂದಿಗಳಾದ ಸುರೇಂದ್ರ, ಲೋಕೇಶ್ ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ವ್ಯವಸ್ಥಾಪಕ ಹರೀಶ್, ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಮತ್ತಿತರ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…
ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…