ನವದೆಹಲಿ: ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತವು ಈಗ ನಿಸರ್ಗ ಚಂಡಮಾರುತವಾಗಿ ಅಬ್ಬರಿಸಿ ಮಹಾರಾಷ್ಟ್ರದ ಕರಾವಳಿ ಕಡೆಗೆ ಚಲಿಸಿದ್ದು ಜೂ.3 ರಂದು ಮಹಾರಾಷ್ಟ್ರ ಕರಾವಳಿಗೆ ನಿಸರ್ಗ ಚಂಡಮಾರುತವು ಅಪ್ಪಳಿಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಚಂಡಮಾರುತ ಎದುರಿಸಲು ಸಕಲ ಸಿದ್ಧತೆ ಮಾಡಲಾಗಿದೆ. ಚಂಡಮಾರುತದ ಕಾರಣದಿಂದ ಗೋವಾ ಸೇರಿದಂತೆ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಸುಮಾರು ಒಂದು ಶತಮಾನದ ಬಳಿಕ ಮುಂಬೈ ಮೊದಲ ಚಂಡಮಾರುತ ಸಮೀಪಿಸುತ್ತಿದ್ದಂತೆ, ಮುಂಬೈನಲ್ಲಿ ವಾಯುವಿಹಾರ ಮತ್ತು ಕಡಲತೀರಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸದ್ಯ ಚಂಡಮಾರುತವು ಸುಮಾರು 110 ರಿಂದ 120 ಕಿಲೋ ಮೀಟರ್ ವೇಗದಲ್ಲಿದ್ದು ಜೂನ್ 3 ರ ಮಧ್ಯಾಹ್ನ ಮುಂಬೈನಿಂದ ದಕ್ಷಿಣಕ್ಕೆ 94 ಕಿ.ಮೀ ದೂರದಲ್ಲಿರುವ ಅಲಿಬಾಗ್ ಪ್ರದೇಶಕ್ಕೆ 100 ಕಿಲೋ ಮೀಟರ್ ವೇಗದಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ಮಹಾರಾಷ್ಟ್ರದ ಉತ್ತರ ಕರಾವಳಿ ಭಾಗ ಮತ್ತು ಗುಜರಾತ್ ನ ದಕ್ಷಿಣ ಕರಾವಳಿ ಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಕಾರಣದಿಂದ ಪಾಲ್ಘರ್, ಪುಣೆ, ಥಾಣೆ, ಮುಂಬೈ, ರಾಯಗಡ್, ಧುಲೆ ಮತ್ತು ನಂದೂರ್ಬಾರ್, ನಾಸಿಕ್ ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಚಂಡಮಾರುತದ ಹಾನಿ ಎದುರಿಸಲು 15 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳು ದೌಡು ಮಹಾರಾಷ್ಟ್ರದಲ್ಲಿ ನಿಸರ್ಗ ಚಂಡಮಾರುತದ ಭೀತಿ ಹಿನ್ನೆಲೆ ಒಟ್ಟು 15 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಏಳು ನಗರಗಳಲ್ಲಿ ಮುನ್ನೆಚ್ಚರಿಕೆಯಾಗಿ ನಿಯೋಜನೆ ಮಾಡಲಾಗಿದೆ. ಮುಂಬೈ – 3, ರಾಯಘಡ್ – 4, ಪಲ್ಘರ್ – 2, ಥಾಣೆ – 2, ರತ್ನಗಿರಿ – 2, ಸಿಂಧುದುರ್ಗ – 1, ನವಮುಂಬೈ – 1 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜನೆ ಮಾಡಲಾಗಿದೆ.
ಈ ನಡುವೆ ನೈರುತ್ಯ ಚಂಡಮಾರುತ ಪ್ರಾರಂಭವಾದ ಒಂದು ದಿನದ ನಂತರ ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಕೇರಳ ರಾಜ್ಯ ರಾಜಧಾನಿ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.ಕೇರಳದ ಮೂರು ಉತ್ತರ ಜಿಲ್ಲೆಗಳಾದ ಕೋಝಿಕೋಡ್, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. 6.4 ಸೆಂ.ಮೀ ನಿಂದ 11.5 ಸೆಂ.ಮೀಟರ್ ವರೆಗೆ ಮಳೆಯಾಗಲಿದ್ದು, 11.5 ಸೆಂ.ಮೀ ನಿಂದ 20.4 ಸೆಂ.ಮೀ.ವರೆಗಿನ ಭಾರಿ ಮಳೆಯಾಗುವ ಎಚ್ಚರಿಕೆ ಇದೆ ಎಂದು ಭಾರತ ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ.
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…
ಅಡಿಕೆಯ ಮೇಲೆ ಯಾವುದೇ ಋಣಾತ್ಮಕ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಬೇಕಾದ ಹಲವು ಅಂಶಗಳು…