ನೀರು ಮತ್ತು ನೈರ್ಮಲ್ಯ : ಜಾಗೃತಿ ಅಭಿಯಾನಕ್ಕೆ ಚಾಲನೆ : 25 ಗ್ರಾ.ಪಂ ಗಳಲ್ಲಿ ಜಾಥಾ

September 18, 2019
12:00 PM

ಮಡಿಕೇರಿ :ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನೀರು ಮತ್ತು ನೈರ್ಮಲ್ಯ ಕುರಿತ ಸಂಚಾರಿ ವಾಹನದ ಮೂಲಕ ಜಾಗೃತಿ ಕಲಾಜಾಥ ಕಾರ್ಯಕ್ರಮಕ್ಕೆ ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಚಾಲನೆ ನೀಡಿದರು.

ನೀರು ಮತ್ತು ನೈರ್ಮಲ್ಯ ಕುರಿತು ಜಿಲ್ಲೆಯ 25 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ 15 ದಿನಗಳ ಕಾಲ ಕಲಾಜಾಥ ಏರ್ಪಡಿಸಲಾಗಿದ್ದು, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮತ್ತು ನೀರಿನ ಸಂರಕ್ಷಣೆ ಕುರಿತು ಬೀದಿ ನಾಟಕ ಹಾಗೂ ಸಾಕ್ಷ್ಯ ಚಿತ್ರಗಳ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಕೊಡಗು ಈಗಾಗಲೇ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿ ಘೋಷಿಸಲ್ಪಟ್ಟಿದ್ದು, ಮುಂದಿನ ಹಂತದಲ್ಲಿ ಘನ, ದ್ರವ ತ್ಯಾಜ್ಯ ನಿರ್ವಹಣೆ ಮತ್ತು ನೀರಿನ ಸಂರಕ್ಷಣೆ ಕುರಿತು ಜನ ಜಾಗೃತಿ ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು.

ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ಕಾಂಪೋಸ್ಟೀಕರಣ ಮಾಡಬೇಕಿದೆ. ಒಣ ಕಸವನ್ನು ಸಂಗ್ರಹಿಸಿ ಮರು ಬಳಕೆ ಮಾಡಬಹುದಾಗಿದೆ ಎಂದರು. ಸ್ವಚ್ಛ ಭಾರತ ಮಿಷನ್ ಅಭಿಯಾನದ ಸಮಾಲೋಚಕರಾದ ಪೆಮ್ಮಯ್ಯ ಅವರು ಮಾತನಾಡಿ ಗೋಡೆ ಬರಹ ಬರೆಸುವುದು, ಸ್ವಚ್ಛತಾ ಕಾರ್ಯಕ್ರಮ, ಸ್ವಚ್ಛಮೇವ ಜಯತೆ, ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ, ಶಾಲೆಗಳಲ್ಲಿ ಮಕ್ಕಳಿಗೆ ಸ್ವಚ್ಛತಾ ಅಭಿಯಾನ ಬಗ್ಗೆ ಕಾರ್ಯಕ್ರಮ, ಘನ, ದ್ರವ ತ್ಯಾಜ್ಯ ನಿರ್ವಹಣೆ ಹಾಗೂ ಸಂಗ್ರಹಣೆ, ಮತ್ತಿತರ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದರು.

ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಮೋಹನ್, ವಾರ್ತಾಧಿಕಾರಿ ಚಿನ್ನಸ್ವಾಮಿ, ಸ್ವಚ್ಛ ಭಾರತ್ ಮಿಷನ್ ಸಮಾಲೋಚಕರಾದ ವಾಸುದೇವ್, ಕಲಾವಿದ ಈ ರಾಜು ಮತ್ತು ತಂಡದವರು ಹಾಜರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror