ಮಡಿಕೇರಿ :ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನೀರು ಮತ್ತು ನೈರ್ಮಲ್ಯ ಕುರಿತ ಸಂಚಾರಿ ವಾಹನದ ಮೂಲಕ ಜಾಗೃತಿ ಕಲಾಜಾಥ ಕಾರ್ಯಕ್ರಮಕ್ಕೆ ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಚಾಲನೆ ನೀಡಿದರು.
ನೀರು ಮತ್ತು ನೈರ್ಮಲ್ಯ ಕುರಿತು ಜಿಲ್ಲೆಯ 25 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ 15 ದಿನಗಳ ಕಾಲ ಕಲಾಜಾಥ ಏರ್ಪಡಿಸಲಾಗಿದ್ದು, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮತ್ತು ನೀರಿನ ಸಂರಕ್ಷಣೆ ಕುರಿತು ಬೀದಿ ನಾಟಕ ಹಾಗೂ ಸಾಕ್ಷ್ಯ ಚಿತ್ರಗಳ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಕೊಡಗು ಈಗಾಗಲೇ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿ ಘೋಷಿಸಲ್ಪಟ್ಟಿದ್ದು, ಮುಂದಿನ ಹಂತದಲ್ಲಿ ಘನ, ದ್ರವ ತ್ಯಾಜ್ಯ ನಿರ್ವಹಣೆ ಮತ್ತು ನೀರಿನ ಸಂರಕ್ಷಣೆ ಕುರಿತು ಜನ ಜಾಗೃತಿ ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು.
ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ಕಾಂಪೋಸ್ಟೀಕರಣ ಮಾಡಬೇಕಿದೆ. ಒಣ ಕಸವನ್ನು ಸಂಗ್ರಹಿಸಿ ಮರು ಬಳಕೆ ಮಾಡಬಹುದಾಗಿದೆ ಎಂದರು. ಸ್ವಚ್ಛ ಭಾರತ ಮಿಷನ್ ಅಭಿಯಾನದ ಸಮಾಲೋಚಕರಾದ ಪೆಮ್ಮಯ್ಯ ಅವರು ಮಾತನಾಡಿ ಗೋಡೆ ಬರಹ ಬರೆಸುವುದು, ಸ್ವಚ್ಛತಾ ಕಾರ್ಯಕ್ರಮ, ಸ್ವಚ್ಛಮೇವ ಜಯತೆ, ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ, ಶಾಲೆಗಳಲ್ಲಿ ಮಕ್ಕಳಿಗೆ ಸ್ವಚ್ಛತಾ ಅಭಿಯಾನ ಬಗ್ಗೆ ಕಾರ್ಯಕ್ರಮ, ಘನ, ದ್ರವ ತ್ಯಾಜ್ಯ ನಿರ್ವಹಣೆ ಹಾಗೂ ಸಂಗ್ರಹಣೆ, ಮತ್ತಿತರ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದರು.
ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಮೋಹನ್, ವಾರ್ತಾಧಿಕಾರಿ ಚಿನ್ನಸ್ವಾಮಿ, ಸ್ವಚ್ಛ ಭಾರತ್ ಮಿಷನ್ ಸಮಾಲೋಚಕರಾದ ವಾಸುದೇವ್, ಕಲಾವಿದ ಈ ರಾಜು ಮತ್ತು ತಂಡದವರು ಹಾಜರಿದ್ದರು.
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…