ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನೆರಿಯಾ ಗ್ರಾಮದ ಇಟ್ಟಾಡಿ ಎಂಬಲ್ಲಿರುವ ನಿಸಾರ್ ಎಂಬಾತನು ಮನೆಯ ಸಮೀಪದ ತಾತ್ಕಾಲಿಕ ಶೆಡ್ಡಿನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆಗೆ ಶುಕ್ರವಾರ ಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಆರೋಪಿ ನಿಸಾರ್ ಮತ್ತು ಇನ್ನಿಬ್ಬರು ಪರಾರಿಯಾಗಿರುತ್ತಾರೆ.
ನೆರಿಯಾ ಗ್ರಾಮದ ಇಟ್ಟಾಡಿ ಎಂಬಲ್ಲಿರುವ ನಿಸಾರ್ ಎಂಬಾತನು ಮನೆಯ ಸಮೀಪದ ತಾತ್ಕಾಲಿಕ ಶೆಡ್ಡಿನಲ್ಲಿ ಜಾನುವಾರುಗಳನ್ನು ಕಳವು ಮಾಡಿಕೊಂಡು ಬಂದು ಯಾವುದೇ ಪರವಾನಿಗೆ ಇಲ್ಲದೇ ಮಾರಾಟ ಮಾಡುವ ಸಲುವಾಗಿ ಜಾನುವಾರುಗಳನ್ನು ಕೊಂದು ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಸುಮಾರು 15,000 ರೂಪಾಯಿ ಮೌಲ್ಯದ ಮಾಂಸ, ಮತ್ತು ಇತರ ಅವಯವಗಳು, ಮರದ ತುಂಡು, ಕತ್ತಿ, ಚೂರಿ, ತಕ್ಕಡಿ ಮತ್ತು ತೂಕದ ಬಟ್ಟುಗಳನ್ನು ಸ್ವಾಧೀನಪಡಿಸಿಕೊಂಡು ಕರ್ನಾಟಕ ಗೋ ಹತ್ಯೆ ನಿಷೇಧ ಕಾಯ್ದೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಅನ್ವಯ ಕೇಸು ದಾಖಲಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel