ಎಲಿಮಲೆ: ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತ್ಯಾನಂದ ಮಾಪಲಕಜೆ ಸೇವೆಯಿಂದ ನಿವೃತ್ತ ರಾದರು.
ಸಹಕಾರಿ ಸಂಘದ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಸಂಘದ ಅಧ್ಯಕ್ಷ ವಿಷ್ಣು ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಂಘದಲ್ಲಿ ನಿತ್ಯಾನಂದ ನಾಯಕ್ ಅವರ ಸೇವೆಯನ್ನು ಶ್ಲಾಘಿಸಿ ನಿವೃತ್ತ ಜೀವನಕ್ಕೆ ಶುಭಹಾರೈಸಿದರು.
ನಿತ್ಯಾನಂದ ನಾಯಕ್ ಹಿರಿಯ ಸಹೋದ್ಯೋಗಿಗಳಾಗಿದ್ದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎ.ವಿ.ಶ್ರೀನಿವಾಸ ರಾವ್ ಮತ್ತು ಸುಬ್ರಹ್ಮಣ್ಯ ಭಟ್ ಅವರುಗಳು ನಿತ್ಯಾನಂದ ನಾಯಕ್ ಅವರೊಂದಿಗಿನ ತಮ್ಮ ಸೇವಾವಧಿಯ ನೆನಪುಗಳನ್ನು ಮೆಲುಕು ಹಾಕಿದರು.
ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷ ಉಮೇಶ ಪ್ರಭು ಅವರು ನಿತ್ಯಾನಂದ ನಾಯಕ್ ಅವರು ಸಂಘದಲ್ಲಿ ಸಲ್ಲಿಸಿದ ಸೇವೆಯನ್ನು ಶ್ಲಾಘಿಸಿದರು. ಸೇವಾನಿವೃತ್ತ ನಿತ್ಯಾನಂದ ನಾಯಕ್ ಅವರು ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರನ್ನೂ ನೆನಪಿಸಿಕೊಂಡು ಕೃತಜ್ಞತೆ ಸಲ್ಲಿಸಿದರು.
ಸಂಘದ ನಿಯೋಜಿತ ಮುಖ್ಯಕಾರ್ಯನಿರ್ವಹಣಾಧಿಕಾರಿ ಯು.ಜಗನ್ನಾಥ ಶೆಟ್ಟಿ ಅವರು ಕಾರ್ಯ ಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಮಹೇಶ ಗಟ್ಟಿಗಾರು ವಂದನಾರ್ಪಣೆಗೈದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…