ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷತೆಗೆ ಚುನಾವಣೆ : ವಿಷ್ಣು ಭಟ್ ಗೆಲುವು

November 8, 2019
1:48 PM

ಎಲಿಮಲೆ : ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಷ್ಣು ಭಟ್ ಬಿ ಆಯ್ಕೆಯಾಗಿದ್ದಾರೆ. 6 – 4 ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ವಿಷ್ಣು ಭಟ್ ಮರುಆಯ್ಕೆಯಾಗಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆ ಬಳಿಕ ನಡೆದ ಬೆಳವಣಿಗೆಯಲ್ಲಿ ತಾಲೂಕಿನಿಂದ ಮತದಾನ ಮಾಡಿದ  ಎಲ್ಲಾ 17 ಮಂದಿ ರಾಜೀನಾಮೆ ನೀಡುವಂತೆ ಬಿಜೆಪಿ ಹಾಗೂ ಸಂಘಪರಿವಾರ ಸೂಚನೆ ನೀಡಿತ್ತು. ಇದಕ್ಕೂ ಮೊದಲು ಕಾನತ್ತೂರುವರೆಗೂ ಈ ಪ್ರಕರಣ ಹೋಗಿತ್ತು. ಅದಾದ ನಂತರ ರಾಜೀನಾಮೆ ಪ್ರಕ್ರಿಯೆ ನಡೆದರೂ ಕೆಲವು ಕಡೆ ರಾಜೀನಾಮೆ ಪ್ರಕ್ರಿಯೆ  ನಡೆದಿರಲಿಲ್ಲ. ನೆಲ್ಲೂರು ಕೆಮ್ರಾಜೆಯಲ್ಲಿ ಪಕ್ಷದ ಹಾಗೂ ಸಂಘಪರಿವಾರದ ಸೂಚನೆ ಮೇರೆಗೆ ಅಧ್ಯಕ್ಷರಾಗಿದ್ದ ವಿಷ್ಣು ಭಟ್ ರಾಜೀನಾಮೆ ನೀಡಿದ್ದರು.  ಹೀಗಾಗಿ ತೆರವಾಗಿದ್ದ ಈ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು.

ಶುಕ್ರವಾರ ನಡೆದ ಚುನಾವಣೆಯಲ್ಲಿ ಸಹಕಾರಿ ಸಂಘದ  ನಿರ್ದೇಶಕರುಗಳಾದ ವಿಷ್ಣು ಭಟ್  ಹಾಗೂ ಸವಿನ್ ಕೊಡಪ್ಪಾಲ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದರು. ಹೀಗಾಗಿ ಚುನಾವಣೆ ನಡೆಯಿತು. ವಿಷ್ಣು ಭಟ್ ಅವರ ಪರ 6 ಮತಗಳು ಹಾಗೂ ಸವಿನ್ ಕೊಡಪ್ಪಾಲ ಪರ 4 ಮತಗಳು ಬಂದವು. ಹೀಗಾಗಿ ವಿಷ್ಣು ಭಟ್ ಅವರು ಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್
ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror