ಎಲಿಮಲೆ : ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಷ್ಣು ಭಟ್ ಬಿ ಆಯ್ಕೆಯಾಗಿದ್ದಾರೆ. 6 – 4 ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ವಿಷ್ಣು ಭಟ್ ಮರುಆಯ್ಕೆಯಾಗಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆ ಬಳಿಕ ನಡೆದ ಬೆಳವಣಿಗೆಯಲ್ಲಿ ತಾಲೂಕಿನಿಂದ ಮತದಾನ ಮಾಡಿದ ಎಲ್ಲಾ 17 ಮಂದಿ ರಾಜೀನಾಮೆ ನೀಡುವಂತೆ ಬಿಜೆಪಿ ಹಾಗೂ ಸಂಘಪರಿವಾರ ಸೂಚನೆ ನೀಡಿತ್ತು. ಇದಕ್ಕೂ ಮೊದಲು ಕಾನತ್ತೂರುವರೆಗೂ ಈ ಪ್ರಕರಣ ಹೋಗಿತ್ತು. ಅದಾದ ನಂತರ ರಾಜೀನಾಮೆ ಪ್ರಕ್ರಿಯೆ ನಡೆದರೂ ಕೆಲವು ಕಡೆ ರಾಜೀನಾಮೆ ಪ್ರಕ್ರಿಯೆ ನಡೆದಿರಲಿಲ್ಲ. ನೆಲ್ಲೂರು ಕೆಮ್ರಾಜೆಯಲ್ಲಿ ಪಕ್ಷದ ಹಾಗೂ ಸಂಘಪರಿವಾರದ ಸೂಚನೆ ಮೇರೆಗೆ ಅಧ್ಯಕ್ಷರಾಗಿದ್ದ ವಿಷ್ಣು ಭಟ್ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿದ್ದ ಈ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು.
ಶುಕ್ರವಾರ ನಡೆದ ಚುನಾವಣೆಯಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳಾದ ವಿಷ್ಣು ಭಟ್ ಹಾಗೂ ಸವಿನ್ ಕೊಡಪ್ಪಾಲ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದರು. ಹೀಗಾಗಿ ಚುನಾವಣೆ ನಡೆಯಿತು. ವಿಷ್ಣು ಭಟ್ ಅವರ ಪರ 6 ಮತಗಳು ಹಾಗೂ ಸವಿನ್ ಕೊಡಪ್ಪಾಲ ಪರ 4 ಮತಗಳು ಬಂದವು. ಹೀಗಾಗಿ ವಿಷ್ಣು ಭಟ್ ಅವರು ಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490