ಸುಳ್ಯ:ಭಾರತದಲ್ಲಿ ಜನರು ತಮ್ಮ ತಮ್ಮ ಆಚರಣೆಯಲ್ಲಿ , ಪದ್ಧತಿ ಮತ್ತು ಪರಂಪರೆಯಲ್ಲಿ ಜಾತ್ಯಾತೀತ ಎಂಬ ಅಂಶವನ್ನು ಮೈಗೂಡಿಸಿಕೊಂಡು ಸಹಬಾಳ್ವೆಯಿಂದ ಜೀವಿಸುವ ಮನೋಪ್ರವೃತ್ತಿ ಯನ್ನು ಹೊಂದಿದವರು. ಅದಕ್ಕೆ ಯಾವತ್ತೂ ದಕ್ಕೆ ಬಾರದ ರೀತಿಯಲ್ಲಿ ಮುಂದುವರಿಯುತ್ತಾ ಬಾಳಬೇಕು ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅವರು ನುಡಿದರು.
ಅವರು ಕಾಲೇಜಿನಲ್ಲಿ ಆಯೋಜಿಸಲಾದ ಸದ್ಭಾವನಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕೇವಲ ಕಾಟಾಚಾರಕ್ಕಾಗಿ ಈ ದಿನಾಚರಣೆಯನ್ನು ಆಚರಿಸದೆ, ನಾವು ಮಾಡುವ ಪ್ರತಿಯೊಂದು ಕೆಲಸದಲ್ಲಿ ಯಾವುದೇ ಜಾತಿ, ಧರ್ಮ, ಮತ ಎಂಬ ಬೇಧಭಾವ ಇಲ್ಲದೆ ಒಟ್ಟಾಗಿ ಕೆಲಸ ಮಾಡುವ ಮಾನಸಿಕತೆಯನ್ನು ಬೆಳೆಸಿಕೊಳ್ಳಬೇಕು ಎಂದರು.ನಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು, ದೇಶದ ಸಂವಿಧಾನ ಮತ್ತು ಕಾನೂನುಗಳನ್ನು ಗೌರವಿಸುತ್ತಾ , ಸೌಹಾರ್ದತೆಯಿಂದ ಬಾಳಿದಾಗ ಸದೃಢ ಭಾರತ ನಮ್ಮದಾಗುತ್ತದೆ ಎಂದರು. ನಂತರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಪ್ರಾಂಶುಪಾಲರು ಬೋಧಿಸಿದರು.
ಕಾಲೇಜಿನ ಉಪನ್ಯಾಸಕ ವೃಂದವರು ಭಾಗವಹಿಸಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…