ಸುಳ್ಯ: ಶಿಕ್ಷಣ ಎಂಬುದು ಅದ್ಭುತ ಶಕ್ತಿ, ವಿದ್ಯಾರ್ಥಿಗಳ ಪ್ರತಿಭೆ ತೋರ್ಪಡಿಸುವಲ್ಲಿ ಶಿಕ್ಷಣ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾಭ್ಯಾಸದ ಅವಧಿಯಲ್ಲಿ ಏಕಾಗ್ರತೆ ಸಾಧಿಸುವುದು ಬಹಳ ಮುಖ್ಯ ಎಂದು ನೆಹರು ಮೆಮೋರಿಯಲ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಗಿರಿಧರ ಗೌಡ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕಾಗಿ ಆಯೋಜಿಸಲಾದ “ಉತ್ಕರ್ಷ -2019″ನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನೆಹರು ಮೆಮೋರಿಯಲ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಪ್ರೊ.ಬಾಲಚಂದ್ರ ಗೌಡ ಮಾತನಾಡಿ ಭಾರತದ ಪ್ರತಿಯೊಂದು ಮಗು ವಿದ್ಯಾವಂತ, ಪ್ರತಿಭಾವಂತನಾಗಬೇಕು. ಅವಕಾಶದ ಸದುಪಯೋಗ ಪಡಿಸಬೇಕು ಎಂದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. `ಉತ್ಕರ್ಷ-2019′ ಸಂಯೋಜಕ ದಾಮೋದರ್ ಉಪಸ್ಥಿತರಿದ್ದರು. ಸಂಯೋಜಕಿಯರಾದ ಉಪನ್ಯಾಸಕಿ ರತ್ನಾವತಿ ಸ್ವಾಗತಿಸಿ, ರೇಷ್ಮಾ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಲಕ್ಷ್ಮಣ್ ಏನೆಕಲ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ.ಜವರೇ ಗೌಡ ಉಪಸ್ಥಿತರಿದ್ದರು. ವಿವಿಧ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸುಮಾರು ಹನ್ನೊಂದು ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಸಂಜೆ ನಡೆದ ಸಮಾರೋಪದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವುದು ಹೇಗೆ ಮತ್ತು ಮುಂದಿನ ಹಂತದ ವಿದ್ಯಾಭ್ಯಾಸದ ಆಯ್ಕೆ ಹೇಗಿರಬೇಕು ಎಂಬ ಕುರಿತು ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಯಿತು.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…