ಸುಳ್ಯ: ಬೋಧನೆ ಮತ್ತು ಕಲಿಕೆ ಜೊತೆ ಜೊತಯಲ್ಲಿ ಸಾಗಬೇಕು. ಬೋಧನಾ ಕೌಶಲವನ್ನು ಮಕ್ಕಳ ಬೌದ್ಧಿಕ ಮಟ್ಟವನ್ನು ಅರಿತು ಬೋಧಿಸುವ ಕಲೆಯನ್ನು ಸಿದ್ಧಿಸಿಕೊಳ್ಳಬೇಕು. ಆಗ ಕಲಿಕಾ ಪ್ರಕ್ರಿಯೆ ಸುಗಮವಾಗಿ ಸಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರು ಡಾ। ಮಾಧವ ಭಟ್ ಅವರು ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಆಯೋಜಿಸಲಾದ ಪುನಶ್ಚೇತನ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ್ ಅಡ್ತಲೆ , ನೆಹರು ಮೆಮೋರಿಯಲ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಪ್ರೊ। ಬಾಲಚಂದ್ರ ಗೌಡ ಎಂ ಅವರು ಶುಭ ಹಾರೈಸಿದರು .
ಸಮಾರಂಭದ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ। ಗಿರಿಧರ ಗೌಡ , ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಉದಯ ಕೃಷ್ಣ ಬಿ ,ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಉಪಸ್ಥಿತರಿದ್ದರು.
ಆರಂಭದಲ್ಲಿ ಉಪನ್ಯಾಸಕಿ ರಾಜೇಶ್ವರಿ ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಲಕ್ಷ್ಮಣ್ ಏನೆಕಲ್ ಸ್ವಾಗತಿಸಿ ವಂದಿಸಿದರು.
ಬಳಿಕ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸುವ ಮೂಲಕ ತರಬೇತಿಯನ್ನು ಸಂಪನ್ಮೂಲ ವ್ಯಕಿಗಳಾದ ಡಾ। ಮಾಧವ ಭಟ್ ಅವರು ನಡೆಸಿಕೊಟ್ಟರು. ಈ ತರಭೇತಿಯಲ್ಲಿ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಕೆವಿಜಿ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕರು ಭಾಗವಹಿಸಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…