ಸುಳ್ಯ: ಸುಳ್ಯ ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬಂದಿರುವ ಹಿನ್ನಲೆಯಲ್ಲಿ ನಗರ ಪಂಚಾಯತ್ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ ನೇತೃತ್ವದಲ್ಲಿ ಅಂಗಡಿಗಳಿಗೆ, ಹೋಟೆಲ್ ಮತ್ತಿತರ ಕಡೆಗಳಲ್ಲಿ ಭೇಟಿ ನೀಡಿ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಮತ್ತು ಬಳಸದಂತೆ ಎಚ್ಚರಿಕೆ ನೀಡಿದ್ದಾರೆ. ಮುಂದೆ ಪ್ಲಾಸ್ಟಿಕ್ ಬಳಕೆ ಅಥವಾ ಮಾರಾಟ ಕಂಡು ಬಂದರೆ ದಂಡ ವಿಧಿಸುವುದು ಸೇರಿದಂತೆ ಕ್ರಮ ಜರುಗಿಸಲಾಗುವುದು ಎಂದು ಎಚ್ಷರಿಕೆ ನೀಡಿದ್ದಾರೆ.
ಈ ಮಧ್ಯೆ ಆಹಾರ ಸೇವಿಸಿದ ಪ್ಲಾಸ್ಟಿಕ್ ತಟ್ಟೆ ಮತ್ತಿತರ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ ಎಸೆದವರಿಂದಲೇ ತೆಗೆಸಿದ ಘಟನೆ ನಡೆದಿದೆ. ಪರಿವಾರಕಾನ ಭಾಗದಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯವನ್ನು ಎಸೆಯಲಾಗಿತ್ತು. ಈ ಕುರಿತು ಮಾಹಿತಿ ಪಡೆದ ಸ್ವಚ್ಛ ನಗರ ತಂಡದ ಲೋಕೇಶ್ ಗುಡ್ಡೆಮನೆ ಮತ್ತು ವಿನೋದ್ ಲಸ್ರಾದೋ ಕಸ ಹಾಕಿದವರನ್ನು ಪತ್ತೆ ಹಚ್ಚಿ ಅವರಿಂದಲೇ ತ್ಯಾಜ್ಯ ತೆಗೆಸಿ ಅವರಿಂದಲೇ ಪ್ರದೇಶವನ್ನು ಸ್ವಚ್ಛ ಗೊಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…