ಸುಳ್ಯ: ಸುಳ್ಯ ನಗರ ಪಂಚಾಯತ್ ಗೆ ಇಂದು ಮತದಾನ ನಡೆಯಲಿದ್ದು ಸಿದ್ಧತೆಗಳು ಪೂರ್ಣಗೊಂಡಿದೆ. ಮತದಾನಕ್ಕಾಗಿ 20 ಮತಗಟ್ಟೆಗಳನ್ನು ಸಿದ್ಧಪಡಿಸಲಾಗಿದೆ. 20 ಮತಗಟ್ಟೆಗಳ ಪೈಕಿ ಮೂರು ಅತಿ ಸೂಕ್ಷ್ಮ ಮತಗಟ್ಟೆಗಳು ಎಂದು ವಿಂಗಡಿಸಲಾಗಿದೆ.
ಮಸ್ಟರಿಂಗ್ ಕೇಂದ್ರವಾದ ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯದಿಂದ ನಿನ್ನೆ ಮಧ್ಯಾಹ್ನದ ವೇಳೆಗೆ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇವಿಎಂ ಮತ್ತು ಇತರ ಸಾಮಾಗ್ರಿಗಳೊಂದಿಗೆ ಮತಗಟ್ಟೆ ಕಡೆಗೆ ತೆರಳಿದರು. ಅಧ್ಯಕ್ಷ ಮತಗಟ್ಟೆ ಅಧಿಕಾರಿ, ಮೂರು ಮಂದಿ ಮತಗಟ್ಟೆ ಅಧಿಕಾರಿಗಳು, ಓರ್ವ ಡಿಗ್ರೂಪ್ ಸಿಬ್ಬಂದಿ ಸೇರಿ ಐದು ಮಂದಿ ಹಾಗು ಮೂರು ಮಂದಿ ಭದ್ರತಾ ಸಿಬ್ಬಂದಿಗಳನ್ನು ಪ್ರತಿ ಮತಗಟ್ಟೆಗೆ ನಿಯೋಜನೆ ಮಾಡಲಾಗಿದೆ. ಬೆಳಿಗ್ಗೆ ಏಳರಿಂದ ಸಂಜೆ ಐದರ ತನಕ ಮತದಾನ ನಡೆಯಲಿದೆ.
20 ವಾರ್ಡ್‍ಗಳಲ್ಲಿರುವ 6,928 ಪುರುಷ ಮತ್ತು 7,165 ಮಹಿಳೆಯರು ಸೇರಿ ಒಟ್ಟು 14,093 ಮತದಾರರು 53 ಮಂದಿ ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ವಾರ್ಡ್ ಸಂಖ್ಯೆ 14(ಕಲ್ಲುಮುಟ್ಲು), 15(ನಾವೂರು), 16(ಕಾಯರ್ತೋಡಿ) ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಗಟ್ಟೆಗಳು ಎಂದು ವಿಂಗಡಿಸಲಾಗಿದೆ. ಇಲ್ಲಿ ಹೆಚ್ಚಿನ ಬಂದೋಬಸ್ತ್ ಏರ್ಪಡಿಸಲಾಗುವುದು.
ನಗರ ಪಂಚಾಯತ್ ಚುನಾವಣೆಯಲ್ಲಿ ಮತ ಯಂತ್ರದ ಬಳಕೆ ಮಾಡಲಾಗುವುದು. ಆದರೆ ವಿವಿ ಪ್ಯಾಟ್ ಬಳಕೆ ಈ ಚುನಾವಣೆಯಲ್ಲಿ ಇರುವುದಿಲ್ಲ. 20 ಮತಗಟ್ಟೆಗಳಿಗಾಗಿ 27 ಇವಿಎಂಗಳನ್ನು ಸಿದ್ಧಪಡಿಸಲಾಗಿದೆ.
ಪೊಲೀಸ್ ಇಲಾಖೆಯೂ ಸಿದ್ಧ:
ಸುಳ್ಯ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಚುನಾವಣೆಗೆ ಭದ್ರತಾ ವ್ಯವಸ್ಥೆಯನ್ನು ಮಾಡಿದೆ. ಮೂರು ಮಂದಿ ಉಪನಿರೀಕ್ಷಕರು, ಆರು ಮಂದಿ ಎಎಸ್‍ಐ, 15 ಮಂದಿ ಹೆಡ್ ಕಾನ್ಸೇಟಬಲ್ಸ್, 27 ಮಂದಿ ಪೊಲೀಸ್ ಸಿಬ್ಬಂದಿಗಳು, 27 ಮಂದಿ ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಮಸ್ಟರಿಂಗ್ ಕೇಂದ್ರವಾದ ನೆಹರೂ ಸ್ಮಾರಕ ಮಹಾವಿದ್ಯಾಲಯದಲ್ಲಿ ಚುನಾವಣೆಗೆ ನಿಯೋಜನೆಗೊಂಡ ಪೊಲೀಸರಿಗೆ ಮಾಹಿತಿ ಮತ್ತು ಸೂಚನೆಗಳನ್ನು ನೀಡಲಾಯಿತು.
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…