ಪ್ರೇಮಲತಾ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸಿದರು
ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಮಂಗಳವಾರ ಮೂರು ನಾಮಪತ್ರ ಸಲ್ಲಿಕೆಯಾಗಿದೆ.
ನ.ಪಂ.ಚುನಾವಣೆಗೆ ನಾಮಪತ್ರ ಸಲ್ಲಿಸಲು ಎರಡು ದಿನ ಮಾತ್ರ ಉಳಿದಿದ್ದು ಇದುವರೆಗೆ ಒಟ್ಟು ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿದೆ. ನಾಳೆ ಮತ್ತು ನಾಡಿದ್ದು ಹೆಚ್ಚಿನ ನಾಮಪತ್ರಗಳು ಸಲ್ಲಿಕೆಯಾಗುವ ಸಾಧ್ಯತೆಯಿದೆ.
ಇಂದು ನಾಮಪತ್ರ ಸಲ್ಲಿಸಿದವರು:
18ನೇ ವಾರ್ಡ್(ಜಟ್ಟಿಪಳ್ಳ)ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರೇಮಲತಾ ಬಿ.ಎಂ.ನಾಮಪತ್ರ ಸಲ್ಲಿಸಿದರು.
ಆರನೇ ವಾರ್ಡ್ (ಬೀರಮಂಗಲ)ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಡಿ.ಎಂ.ಶಾರೀಖ್ ಮತ್ತು ಮೂರನೇ ವಾರ್ಡ್(ಜಯನಗರ)ನಿಂದ ಪಕ್ಷೇತರ ಅಭ್ಯರ್ಥಿಯಾಗಿ ನವೀನ್ ಮಚ್ಚಾದೋ ಇಂದು ನಾಮಪತ್ರ ಸಲ್ಲಿಸಿದರು.
19ನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಸವಿತಾ ಸತೀಶ್ ಸೋಮವಾರ ನಾಮಪತ್ರ ಸಲ್ಲಿಸಿದ್ದರು.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…