Advertisement
Political mirror

ನ.ಪಂ ಚುನಾವಣೆ : ಕಾಂಗ್ರೆಸ್ ಟಿಕೆಟ್ ನಿರಾಕರಣೆ : ಸ್ಫೋಟಗೊಂಡ ಭಿನ್ನಮತ : ಆರ್.ಕೆ.ಮಹಮ್ಮದ್ ಪಕ್ಷೇತರ ಸ್ಪರ್ಧೆ

Share

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಅಭ್ಯರ್ಥಿ ಘೋಷಣೆ ಅಂತಿಮಗೊಳ್ಳುತ್ತಿದ್ದಂತೆ ಸುಳ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಬೋರುಗುಡ್ಡೆ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂದು ಬಿಂಬಿಸಲಾಗಿದ್ದ ಆರ್.ಕೆ.ಮಹಮ್ಮದ್ ಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನಿರಾಕರಣೆಯ ಹಿನ್ನಲೆಯಲ್ಲಿ ಬಂಡಾಯವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಬೋರುಗುಡ್ಡೆ ವಾರ್ಡ್ ನಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸುವುದಾಗಿ “ಸುಳ್ಯನ್ಯೂಸ್.ಕಾಂ” ಗೆ   ತಿಳಿಸಿದ್ದಾರೆ.

ಬೋರುಗುಡ್ಡೆ ಯಲ್ಲಿ ಅಭ್ಯರ್ಥಿತನಕ್ಕೆ ಆರ್.ಕೆ.ಮಹಮ್ಮದ್ ಕೊನೆಯ ಕ್ಷಣದವರೆಗೂ ರೇಸ್ ನಲ್ಲಿದ್ದರು. ಆದರೆ ಇದೀಗ ಬೋರುಗುಡ್ಡೆ ವಾರ್ಡ್ ನ ಅಭ್ಯರ್ಥಿಯಾಗಿ ಕೆ.ಎಂ.ಮುಸ್ತಫಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕ್ರಮದಿಂದ ಅಸಮಾಧಾನಗೊಂಡು ಆರ್.ಕೆ. ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ತನ್ನ ವಾರ್ಡ್ ನ ಮತದಾರರ ಮತ್ತು ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾಗಿ ಆರ್.ಕೆ.ಮಹಮ್ಮದ್ ‘ಸುಳ್ಯನ್ಯೂಸ್. ಕಾಂ ಗೆ ತಿಳಿಸಿದ್ದಾರೆ.

ನಗರ ಪಂಚಾಯತ್ ನ ಕಳೆದ ಮೂರು ಚುನಾವಣೆಯಲ್ಲೂ ಅಭ್ಯರ್ಥಿತನಕ್ಕೆ ಇವರ ಹೆಸರು ಕೇಳಿ ಬಂದಿತ್ತು. ಆದರೆ ಅವಕಾಶ ದೊರೆಯಲಿಲ್ಲ. ಈ ಹಿಂದೆ ಎರಡು ಬಾರಿ ಇವರು ನ.ಪಂ.ಚುನಾವಣೆಗೆ ನಾಮಪತ್ರವನ್ನೂ ಸಲ್ಲಿಸಿದ್ದರು. ಆದರೆ ಪಕ್ಷದ ಒತ್ತಡಕ್ಕೆ ಮಣಿದು ಹಿಂಪಡೆದಿದ್ದರು.

ಈ ಮಧ್ಯೆ ನಾವೂರು ವಾರ್ಡ್ ನ ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ ಅವರು ಕೂಡಾ ಪಕ್ಷದಿಂದ ಟಿಕೆಟ್ ಲಭ್ಯವಾಗದ ಹಿನ್ನೆಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

3 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

3 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

3 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

3 hours ago

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

20 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago