ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಒಂದು ದಿನ ಮಾತ್ರ ಬಾಕಿ ಉಳಿದಿರುವಂತೆ ನಗರದಲ್ಲಿ ಚುನಾವಣಾ ಬಹಿಷ್ಕಾರದ ಕೂಗು ಕೇಳಿ ಬಂದಿದೆ.ಸುಳ್ಯ ತಾಲೂಕು ಟೂರಿಸ್ಟ್ ಕಾರು, ವ್ಯಾನ್ ಚಾಲಕ -ಮಾಲಕರ ಸಂಘವು ನ.ಪಂ.ಚುನಾವಣೆ ಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದು ಬ್ಯಾನರ್ ಅಳವಡಿಸಿದ್ದಾರೆ.
ಟೂರಿಸ್ಟ್ ಕಾರು, ವ್ಯಾನ್ ಗಳಿಗೆ ತಂಗಲು ಸುಸಜ್ಜಿತ ನಿಲ್ದಾಣ ನಿರ್ಮಾಣ ಮಾಡದೇ ಇರುವುದನ್ನು ಪ್ರತಿಭಟಿಸಿ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ನಿಲ್ದಾಣ ನಿರ್ಮಾಣಕ್ಕಾಗಿ ಹಲವು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದರೂ ಇದುವರೆಗೂ ಯಾವುದೇ ಸ್ಪಂದನೆ ದೊರೆಯದ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗ ಇರುವ ನಿಲ್ದಾಣವನ್ನು ಸುಸಜ್ಜಿತವಾಗಿ ಮಾಡಿ ಅದಕ್ಕೆ ನಾಮಫಲಕ ಅಳವಡಿಸಬೇಕು. ಖಾಸಗೀ ವಾಹನಗಳ ನಿಲುಗಡೆಗೆ ಅವಕಾಶ ನೀಡಬಾರದು. ನಗರದ ವಿವಿದೆಡೆ ಟೂರಿಸ್ಟ್ ವಾಹನಗಳಿಗೆ ತಂಗಲು ಸುಸಜ್ಜಿತ ವ್ಯವಸ್ಥೆ ಮಾಡಬೇಕು ಎಂಬುದು ನಮ್ಮ ಬೇಡಿಕೆ. ಈ ಬೇಡಿಕೆ ಈಡೇರದ ಕಾರಣ ಟೂರಿಸ್ಟ್ ಚಾಲಕ, ಮಾಲಕರು ಮತ್ತು ಅವರ ಕುಟುಂಬದವರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸಂಘದ ಪದಾಧಿಕಾರಿಗಳು ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…