ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು ಸೋಮವಾರ ಘೋಷಣೆಯಾಗಲಿದೆ.
ಬಿಜೆಪಿ ಪ್ರಮುಖರು ನಾಳೆ ಬೆಳಿಗ್ಗೆ 11ಗಂಟೆಗೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. 15 ವಾರ್ಡ್ ಗಳ ಅಭ್ಯರ್ಥಿಗಳನ್ನು ನಾಳೆ ಘೋಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಉಳಿದ ವಾರ್ಡ್ ಗಳ ಅಭ್ಯರ್ಥಿಗಳು ಇನ್ನು ಅಂತಿಮ ಗೊಂಡಿಲ್ಲ. ಈ ವಾರ್ಡ್ ಗಳಲ್ಲಿ ಇನ್ನೊಂದು ಸುತ್ತಿನ ಮಾತುಕತೆಯ ಬಳಿಕ ಒಂದೆರಡು ದಿನದಲ್ಲಿ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರತಿ ವಾರ್ಡ್ ಗಳಲ್ಲಿಯೂ ಕಾರ್ಯಕರ್ತರ ಸಭೆ ನಡೆಸಿ ಅಲ್ಲಿ ಸೂಚಿಸಲ್ಪಟ್ಟ ಅಭ್ಯರ್ಥಿ ಗಳ ಪಟ್ಟಿಯನ್ನು ತಯಾರಿಸಲಾಗಿದ್ದು ಈ ಪಟ್ಟಿಯಿಂದ ಅಭ್ಯರ್ಥಿಗಳ ಆಯ್ಕೆಯನ್ನು ಚುನಾವಣಾ ನಿರ್ವಹಣಾ ಸಮಿತಿ ಅಂತಿಮಗೊಳಿಸಿದೆ. ಒಬ್ಬರೇ ಆಕಾಂಕ್ಷಿ ಇರುವ ಕಡೆ, ಮೀಸಲು ಕ್ಷೇತ್ರಗಳಲ್ಲಿ ಅಭ್ಯರ್ಥಿಯ ಆಯ್ಕೆ ನಡೆದಿದ್ದು ಆಕಾಂಕ್ಷಿಗಳು ಹೆಚ್ಚು ಇರುವ ಕೆಲವು ವಾರ್ಡ್ ಗಳ ಅಭ್ಯರ್ಥಿ ಆಯ್ಕೆ ಕಾಯ್ದಿರಿಸಲಾಗಿದೆ. ಬಹುತೇಕ ಹೊಸ ಮುಖಗಳೇ ಅಭ್ಯರ್ಥಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
View Comments
Super news