Advertisement
ಸುದ್ದಿಗಳು

ನ.1 ರಂದು ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ನಿಂತಿಕಲ್ಲು ಶಾಖೆಯ ಉದ್ಘಾಟನೆ

Share

ಸುಳ್ಯ:ಸುಳ್ಯತಾಲೂಕು ಗೌಡರ ಯುವ ಸೇವಾ ಸಂಘ ಪ್ರವರ್ತಿತ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 12 ನೇ ಶಾಖೆ ನಿಂತಿಕಲ್ಲಿನಲ್ಲಿ ನ.1ರಂದು ಕಾರ್ಯಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಖಾ ಕಚೇರಿಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು ಇದರ ಅಧ್ಯಕ್ಷೆ ಕೆ‌.ಲಲಿತ ಜಿ.ಟಿ.ದೇವೇ ಗೌಡ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಗಣಕೀಕರಣದ ಉದ್ಘಾಟನೆಯನ್ನು ಶಾಸಕ ಎಸ್.ಅಂಗಾರ, ಭದ್ರತಾ ಕೊಠಡಿಯನ್ನು ಸಹಕಾರ ಮಹಾಮಂಡಳದ ಮಾಜಿ ಅಧ್ಯಕ್ಷ ಡಾ.ಶೇಖರ ವಿ.ಮಾಲಿ ಪಾಟೀಲ ನೆರವೇರಿಸುವರು. ಸಂಸ್ಥೆಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಥಮ ಠೇವಣಿ ಪತ್ರವನ್ನು ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸವಣೂರು ಸೀತಾರಾಮ ರೈ, ಪ್ರಥಮ ಪಾಲು ಪತ್ರವನ್ನು ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಕಾಶ್ ರಾವ್, ಪ್ರಥಮ ಸಾಲ ಪತ್ರವನ್ನು ಹಿರಿಯ ಸಹಕಾರಿ ಜಾಕೆ ಮಾಧವ ಗೌಡ ವಿತರಣೆ ಮಾಡುವರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯ ಎಸ್.ಎನ್.ಮನ್ಮಥ, ಎಣ್ಮೂರು ಗ್ರಾ.ಪಂ.ಅಧ್ಯಕ್ಷೆ ಜಾನಕಿ ಅಲೆಂಗಾರ, ಪ್ರಗತಿಪರ ಕೃಷಿಕ ಕೆ.ಎನ್.ಪರಮೇಶ್ವರಯ್ಯ ಕಲ್ಮಡ್ಕ, ಕಲ್ಮಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೆಟ್ಟ ಉದಯಕುಮಾರ್, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಧಾಕರ ರೈ ಎ.ಎಂ, ಎಣ್ಮೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಹುದೇರಿ, ಧರ್ಮಶ್ರೀ ಆರ್ಕೇಡ್ ನ ಮಾಲಕ ಎಂ.ಮಾಧವ ಗೌಡ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಪಿ.ಎಸ್‌.ಗಂಗಾಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ‌.ಟಿ.ವಿಶ್ವನಾಥ್, ನಿರ್ದೇಶಕರಾದ ಪಿ.ಸಿ.ಜಯರಾಮ, ನಿತ್ಯಾನಂದ ಮುಂಡೋಡಿ, ಜಾಕೆ ಸದಾನಂದ, ಎ.ವಿ.ತೀರ್ಥರಾಮ, ಚಂದ್ರಾ ಕೋಲ್ಚಾರ್, ಕೆ.ಸಿ.ಸದಾನಂದ, ಲಕ್ಷ್ಮೀ ನಾರಾಯಣ ನಡ್ಕ, ಮೋಹನ್ ರಾಂ ಸುಳ್ಳಿ, ದಿನೇಶ್ ಮಡಪ್ಪಾಡಿ, ದಾಮೋದರ ಎನ್.ಎಸ್. ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

4 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

12 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

19 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago