ಅಬುದಾಬಿ: ಅನಿವಾಸಿ ಕನ್ನಡಿಗರ ಹೆಮ್ಮೆಯ ಬಹುದೊಡ್ಡ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಬುದಾಬಿ ಝೋನ್ ವತಿಯಿಂದ ಅಂತಾರಾಷ್ಟ್ರೀಯ ಮಿಲಾದ್ ಕಾನ್ಫರೆನ್ಸ್ ವಿಜೃಂಭಣೆಯಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನವೆಂಬರ್ 15 ರಂದು ಅಬುಧಾಬಿ ಸುಡಾನಿ ಸಭಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮೀಲಾದ್ ಸ್ವಾಗತ ಸಮಿತಿ ಅಧ್ಯಕ್ಷರಾದ ಹಾಜಿ ಮುಹಮ್ಮದಲಿ ವಳವೂರ್ ತಿಳಿಸಿದರು.
ಪ್ರಸ್ತುತ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಗಾರರಾಗಿ ಖ್ಯಾತ ವಾಗ್ಮಿ ,ಪ್ರಭಾಷಣ ಲೋಕದ ಮಿನುಗು ತಾರೆ, ಬಹು: ಹಾಫಿಲ್ ಮಸ್ಊದ್ ಸಖಾಫಿ ಗೂಡಲ್ಲೂರ್ ಆಗಮಿಸಿ ಹುಬ್ಬುರಸೂಲ್ ಪ್ರಭಾಷಣ ನಡೆಸಲಿದ್ದಾರೆ. ಅಸ್ಯೆಯ್ಯದ್ ಝೈನುಲ್ ಆಭೀದಿನ್ ಮುತ್ತು ಕೋಯ ತಂಙಳ್ ದುಃಅ ಆಶಿರ್ವಚನ ನಿಡಲಿದ್ದಾರೆ. ಅಲ್ಲದೆ ಕೆ.ಸಿ.ಎಫ್ ಅಬುಧಾಬಿ ಪ್ರತಿಭೆಗಳಿಂದ ಬುರ್ದಾ ಆಲಾಪನೆ,ನಅತೆ ಶರೀಫ್,ಕವ್ವಾಲಿ, ದಫ್ಫ್ ಪ್ರದರ್ಶನ ನಡೆಯಲಿದೆ.ಈ ಕಾರ್ಯಕ್ರಮಕ್ಕೆ ಇನ್ನೂ ಹಲವು ಧಾರ್ಮಿಕ, ಸಾಮಾಜಿಕ ಉಲಮಾ ಉಮರ ನಾಯಕರು ಆಗಮಿಸಲಿದ್ದಾರೆ ಎಂದು ಮೀಲಾದ್ ಸಮಾವೇಶ ಸ್ವಾಗತ ಸಮಿತಿ ಜನರಲ್ ಕನ್ವೀನರ್ ಅಬ್ದುಲ್ ಹಕೀಮ್ ತುರ್ಕಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…