ಸುಳ್ಯ: ಹಿರಿಯ ಸಾಹಿತಿ, ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಡಾ.ಬಿ. ಪ್ರಭಾಕರ ಶಿಶಿಲರ ಆತ್ಮಕಥನ ‘ಬೊಗಸೆ ತುಂಬಾ ಕನಸು’ ಪುಸ್ತಕ ಬಿಡುಗಡೆ ಸಮಾರಂಭ ನ.15 ರಂದು ಪೂ.10 ಕ್ಕೆ ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಕೆ.ವಿ.ಜಿ ಷಷ್ಟ್ಯಬ್ದ ಭವನದಲ್ಲಿ ನಡೆಯಲಿದೆ.
ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯ ಮತ್ತು ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಮೈಸೂರು ರಾಜ್ ಪ್ರಕಟಿಸಿರುವ ಕೃತಿಯನ್ನು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಬಿಡುಗಡೆ ಮಾಡಲಿದ್ದಾರೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸುವರು.
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಮುಖ್ಯ ಅತಿಥಿಗಳಾಗುವರು. ದೆಹಲಿ ಜವಾಹರಲಾಲ್ ನೆಹರೂ ವಿಶ್ವ ವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಡಾ.ಬಿ.ಪುರುಷೋತ್ತಮ ಬಿಳಿಮಲೆ ಪ್ರಧಾನ ಭಾಷಣ ಮಾಡುವರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ನಿರ್ದೇಶಕರಾದ ಶೋಭಾ ಚಿದಾನಂದ, ಅಕ್ಷಯ್ ಕೆ.ಸಿ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…